ADVERTISEMENT

ನೈಸ್ ನಿರ್ದೇಶಕ ಬಂಧನ?

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2013, 20:19 IST
Last Updated 22 ಏಪ್ರಿಲ್ 2013, 20:19 IST

ಬೆಂಗಳೂರು: ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್ (ನೈಸ್) ಸಂಸ್ಥೆಯ ನಿರ್ದೇಶಕ ರುದ್ರನಗೌಡ ಮತ್ತು ಸಂಸ್ಥೆಯ ಮತ್ತೊಬ್ಬ ಪ್ರಮುಖರನ್ನು ಬೆಂಗಳೂರು ಮಹಾನಗರ ಕಾರ್ಯಪಡೆಯ (ಬಿಎಂಟಿಎಫ್) ತಂಡ ಸೋಮವಾರ ಬೀದರ್‌ನಲ್ಲಿ ವಶಕ್ಕೆ ತೆಗೆದುಕೊಂಡಿದೆ. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಶೋಕ ಖೇಣಿ ಅವರ ಬಂಧನಕ್ಕಾಗಿ ತಂಡ ಬೀದರ್‌ಗೆ ತೆರಳಿದೆ ಎಂಬ ದಟ್ಟ ವದಂತಿಯೂ ಹಬ್ಬಿದೆ.

`ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆಗೆ ಅಗತ್ಯವೇ ಇಲ್ಲದಿದ್ದರೂ ಹೆಚ್ಚುವರಿಯಾಗಿ 3,000 ಎಕರೆ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಲಾಗಿದ್ದು, ಸಂಬಂಧಿಸಿದ ಪ್ರಾಧಿಕಾರಗಳಿಂದ ಅನುಮತಿ ಪಡೆಯದೆ ಕಾನೂನುಬಾಹಿರವಾಗಿ ನಿವೇಶನಗಳನ್ನು ರಚಿಸಲಾಗಿದೆ' ಎಂದು ಗವಿಪುರದ ಕೆಂಪೇಗೌಡ ಎಂಬುವವರು ಬಿಎಂಟಿಎಫ್‌ಗೆ ದೂರು ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.