ADVERTISEMENT

ನ್ಯಾಯಮೂರ್ತಿ ನಾಯಕ ಹೆಸರು ಕೈಬಿಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2016, 19:49 IST
Last Updated 21 ಫೆಬ್ರುವರಿ 2016, 19:49 IST
ಜನಾಧಿಕಾರ ಸಂಘರ್ಷ ಸಮಿತಿ ಸದಸ್ಯರು ಪುರಭವನ ಎದುರು ಭಾನುವಾರ ಪ್ರತಿಭಟನೆ ನಡೆಸಿದರು– ಪ್ರಜಾವಾಣಿ ಚಿತ್ರ
ಜನಾಧಿಕಾರ ಸಂಘರ್ಷ ಸಮಿತಿ ಸದಸ್ಯರು ಪುರಭವನ ಎದುರು ಭಾನುವಾರ ಪ್ರತಿಭಟನೆ ನಡೆಸಿದರು– ಪ್ರಜಾವಾಣಿ ಚಿತ್ರ   

ಬೆಂಗಳೂರು: ಲೋಕಾಯುಕ್ತ ಹುದ್ದೆಗೆ ಶಿಫಾರಸು ಮಾಡಲಾಗಿರುವ ನ್ಯಾಯಮೂರ್ತಿ ಎಸ್‌.ಆರ್. ನಾಯಕ ಅವರ ಹೆಸರನ್ನು ಕೈಬಿಡಬೇಕು ಹಾಗೂ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು ಎಂದು ಆಗ್ರಹಿಸಿ, ಜನಾಧಿಕಾರ ಸಂಘರ್ಷ ಸಮಿತಿ ಸದಸ್ಯರು ನಗರದ ಪುರಭವನದ ಎದುರು ಭಾನುವಾರ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಸಂಘದ ಸಹ ಅಧ್ಯಕ್ಷ ಆದರ್ಶ ಅಯ್ಯರ್‌, ‘ನಾಯಕ ಅವರ ಮೇಲೆ ಕೆಲ ಆರೋಪಗಳಿದ್ದು, ಈ ಸಂಬಂಧ ಲೋಕಾಯುಕ್ತ ಎಡಿಜಿಪಿಗೆ ಜ. 13ರಂದು ದೂರು ನೀಡಿದ್ದೇವೆ. ಆದರೆ ಇದುವರೆಗೂ ಎಫ್‌ಐಆರ್‌ ದಾಖಲಿಸಿಲ್ಲ’ ಎಂದು ಅವರು ಈ ವೇಳೆ ಆರೋಪಿಸಿದರು.

‘ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ನಾಯಕ್ ಅವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು. ಅಲ್ಲದೆ,  ರಾಜ್ಯ ಕಾನೂನು ಆಯೋಗದ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕು. ಯಾವುದೇ ಕಾರಣಕ್ಕೂ ಅವರನ್ನು ಲೋಕಾಯುಕ್ತ ಹುದ್ದೆಗೆ ನೇಮಿಸಬಾರದು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.