ADVERTISEMENT

ನ.8 ರಂದು ಕಪ್ಪು ಹಣ ವಿರೋಧಿ ದಿನ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2017, 19:33 IST
Last Updated 26 ಅಕ್ಟೋಬರ್ 2017, 19:33 IST

ಬೆಂಗಳೂರು: ನವೆಂಬರ್‌ 8 ರಂದು ರಾಜ್ಯದಾದ್ಯಂತ ಕಪ್ಪು ಹಣ ವಿರೋಧಿ ದಿನ ಆಚರಿಸಲು ರಾಜ್ಯ ಬಿಜೆಪಿ ಪ್ರಮುಖರ ಸಭೆ ನಿರ್ಧರಿಸಿದೆ.

ದೊಡ್ಡ ಮುಖ ಬೆಲೆಯ ನೋಟು ರದ್ದು ಮಾಡಿ ನವೆಂಬರ್‌ 8 ಕ್ಕೆ ಒಂದು ವರ್ಷ ತುಂಬುವ ಕಾರಣ ಕಾಂಗ್ರೆಸ್‌ ಮತ್ತು ಮಿತ್ರ ಪಕ್ಷಗಳು ಕಪ್ಪು ದಿನ ಆಚರಿಸಲು ನಿರ್ಧರಿಸಿವೆ. ಇದಕ್ಕೆ ಪ್ರತಿಯಾಗಿ ಕಪ್ಪು ಹಣ ವಿರೋಧಿ ದಿನ ಆಚರಿಸಲು ತೀರ್ಮಾನಿಸಲಾಯಿತು ಎಂದು ಬಿಜೆಪಿ ಹಿರಿಯ ನಾಯಕ ಆರ್‌. ಅಶೋಕ್‌ ಗುರುವಾರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.ಅಂದು ರಾಜ್ಯದ ಎಲ್ಲ ಜಿಲ್ಲೆಗಳು ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಕಪ್ಪು ಹಣ ವಿರೋಧಿ ದಿನ ಆಚರಿಸಲಾಗುವುದು ಎಂದರು.

ನವೆಂಬರ್‌ 2 ರಂದು ಕರ್ನಾಟಕ ಪರಿವರ್ತನೆ ರಥ ಯಾತ್ರೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಒಂದು ಲಕ್ಷ ಬೈಕ್‌ಗಳು ಪಾಲ್ಗೊಳ್ಳಲಿವೆ. ಕಾರ್ಯಕ್ರಮದ ಸಿದ್ಧತೆಗಾಗಿ 25 ಸಮಿತಿಗಳನ್ನು ರಚಿಸಲಾಗಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.