ADVERTISEMENT

ಪಕ್ಷಗಳಿಂದ ಬ್ರಾಹ್ಮಣರ ಕಡೆಗಣನೆ

​ಪ್ರಜಾವಾಣಿ ವಾರ್ತೆ
Published 8 ಜೂನ್ 2012, 19:30 IST
Last Updated 8 ಜೂನ್ 2012, 19:30 IST

ಬೆಂಗಳೂರು: `ರಾಜ್ಯದ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳೂ ಬ್ರಾಹ್ಮಣ ಸಮಾಜವನ್ನು ಕಡೆಗಣಿಸುತ್ತಿವೆ~ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ್ ಆರೋಪಿಸಿದರು.

ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಇತ್ತೀಚೆಗೆ ಯಾವ ರಾಜಕೀಯ ಪಕ್ಷಗಳೂ ಬುದ್ಧಿವಂತ ಹಾಗೂ ವಿದ್ಯಾವಂತ ಅಭ್ಯರ್ಥಿಗಳಿಗೆ ಟಿಕೆಟ್ ನೀಡುತ್ತಿಲ್ಲ. ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಪದವೀಧರ ಕ್ಷೇತ್ರದ ಚುನಾವಣೆಯಲ್ಲೂ ಬ್ರಾಹ್ಮಣರನ್ನು ನಿರ್ಲಕ್ಷಿಲಾಗುತ್ತಿದೆ.

ಮೊದಲಿನಿಂದಲೂ ಬ್ರಾಹ್ಮಣರು ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುತ್ತಲೇ ಬಂದಿದ್ದಾರೆ. ಆದರೆ ಬಿಜೆಪಿ ಪಕ್ಷವೂ ಇತ್ತೀಚೆಗೆ ಬ್ರಾಹ್ಮಣರನ್ನು ಕಡೆಗಣಿಸುತ್ತಿದೆ~ ಎಂದು ಅವರು ದೂರಿದರು.`ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಗುಣ ಹಾಗೂ ಅರ್ಹತೆಗಳನ್ನು ಪರಿಗಣಿಸದೇ ವಿಧಾನಸಭಾ ಚುನಾವಣೆಗಳಲ್ಲಿ ಸೋತ ಅಭ್ಯರ್ಥಿಗಳನ್ನು ವಿಧಾನ ಪರಿಷತ್‌ಗೆ ಆರಿಸುವ ಪರಿಪಾಠ ಹೆಚ್ಚಾಗುತ್ತಿದೆ.

ಸಮಾಜದ ಅವಿಭಾಜ್ಯ ಅಂಗವಾಗಿರುವ ಬ್ರಾಹ್ಮಣರನ್ನು ರಾಜಕೀಯ ಪಕ್ಷಗಳು ಕಡೆಗಣಿಸುತ್ತಿರುವುದು ಸರಿಯಲ್ಲ. ಈ ಬಗ್ಗೆ ಎಲ್ಲಾ ರಾಜಕೀಯ ಪಕ್ಷಗಳೂ ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು~ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.