ಮಹದೇವಪುರ: ವಿಧಾನ ಪರಿಷತ್‌ಗೆ ಆಯ್ಕೆಯಾಗುವ ಮೂಲಕ ಸಕ್ರಿಯವಾಗಿ ಸಮಾಜ ಸೇವೆಯಲ್ಲಿ ತೊಡಗುವ ಅವಕಾಶ ಸಿಕ್ಕಂತಾಗಿದೆ ಎಂದು ಪಕ್ಷೇತರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ವಿಜಯಗಳಿಸಿದ ವಿಧಾನ ಪರಿಷತ್ ಸದಸ್ಯ ಭೈರತಿ ಸುರೇಶ ಅಭಿಪ್ರಾಯಪಟ್ಟರು.
ಕ್ಷೇತ್ರದ ಹೂಡಿ ವಾರ್ಡ್‌ನ ಭೈರತಿ ಗ್ರಾಮದಲ್ಲಿ ಸ್ಥಳೀಯರು ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.ಇದುವರೆಗೂ ವೈಯಕ್ತಿಕವಾಗಿ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದೆ. ಸದ್ಯ ರಾಜಕೀಯವಾಗಿ ಮತ್ತಷ್ಟು ಹೆಚ್ಚಿನ ಪ್ರಮಾಣದಲ್ಲಿ ಜನತೆಯ ಸೇವೆಯನ್ನು ಮಾಡುವಂತಹ ಸುಸಂದರ್ಭ ಬಂದೊದಗಿದೆ ಎಂದ ಅವರು ಪಕ್ಷ ಭೇದ ಮರೆತು ಅಭಿವೃದ್ಧಿ ಕಾರ್ಯಗಳಲ್ಲಿ ತಮ್ಮ ತೊಡಗಿಸಿಕೊಳ್ಳುವುದಾಗಿ ತಿಳಿಸಿದರು.
ಮಹದೇವಪುರ ಕ್ಷೇತ್ರದ ಅಭಿವೃದ್ಧಿಗೂ ಕೂಡ ಶ್ರಮವಹಿಸಿ ದುಡಿಯುತ್ತೇನೆ ಎಂದ ಅವರು ವೈಯಕ್ತಿಕವಾಗಿಯೂ ಜನತೆಯ ಕಷ್ಟ-ಸುಖಗಳಲ್ಲಿ ಭಾಗಿಯಾಗುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಅಗರ ಆರ್. ಪ್ರಕಾಶ, ಬಾಬು,ರಾಜಶೇಖರ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.