ADVERTISEMENT

ಪಠ್ಯಪುಸ್ತಕ ವಿತರಣೆ

​ಪ್ರಜಾವಾಣಿ ವಾರ್ತೆ
Published 12 ಜೂನ್ 2011, 19:35 IST
Last Updated 12 ಜೂನ್ 2011, 19:35 IST

ರಾಜರಾಜೇಶ್ವರಿ ನಗರ: `ಬಡತನದಲ್ಲಿ ಹುಟ್ಟಿ ಬೆಳೆದ ಡಾ. ಅಬ್ದುಲ್ ಕಲಾಂ , ಸರ್ ಎಂ.ವಿಶ್ವೇಶ್ವರಯ್ಯ ಮುಂತಾದವರು ರಾಷ್ಟ್ರಕ್ಕೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ವಿದ್ಯಾರ್ಥಿಗಳು ಅವರ ಹಾದಿಯಲ್ಲಿ ನಡೆಯಬೇಕು~ ಎಂದು ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಕೆ.ಎಂ.ರಾಮಚಂದ್ರ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಕೆ.ಗೊಲ್ಲಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮಕ್ಕಳಿಗೆ ಸಮವಸ್ತ್ರ, ಪಠ್ಯಪುಸ್ತಕ ವಿತರಣೆ ಮಾಡಿ ಮಾತನಾಡಿದ ಅವರು, ` ವಿದ್ಯಾವಂತರಾದಾಗ ಮಾತ್ರ ವಿಶ್ವದಲ್ಲಿ ಎಲ್ಲಿ ಬೇಕಾದರೂ ಜೀವನ ಸಾಗಿಸಬಹುದು. ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಪಡೆದ ಮಕ್ಕಳು ಹಲವು ರಂಗಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ದಾನಿಗಳು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದೆ ಬರಬೇಕಿದೆ~ ಎಂದರು.

ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ವಿ.ಕೃಷ್ಣಪ್ಪ, ಮುಖ್ಯ ಶಿಕ್ಷಕ ಮಲ್ಲಯ್ಯ, ಶಿಕ್ಷಕರಾದ ಎಸ್.ಎಲ್.ಕಳೀಮಠ, ಎಸ್.ಟಿ.ಮಧುರಾ, ಚಂದ್ರಿಕಾ, ನೂರಿನಾ ತಾಜ್, ತಹೀರಾ ಬೇಗಂ ಮಾತನಾಡಿದರು.288 ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪಠ್ಯಪುಸ್ತಕ ವಿತರಿಸಲಾಯಿತು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.