
ಪ್ರಜಾವಾಣಿ ವಾರ್ತೆಬೆಂಗಳೂರು: ಬಿಜೆಪಿ ಸರ್ಕಾರ ಶಾಲಾ ಪಠ್ಯ ಕ್ರಮ ಕೇಸರೀಕರಣಗೊಳಿಸಲು ಮುಂದಾಗಿದೆ ಎಂದು ಆರೋಪಿಸಿ ನಗರ ಯುವ ಕಾಂಗ್ರೆಸ್ ಕಾರ್ಯಕರ್ತರು ಆನಂದ್ ರಾವ್ ವೃತ್ತದ ಬಳಿಯ ಮಹಾತ್ಮ ಗಾಂಧಿ ಪ್ರತಿಮೆಯ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.
ಪ್ರೌಢಶಾಲಾ ಪಠ್ಯ ಕ್ರಮಗಳಲ್ಲಿ ಜಾತಿ ಹಾಗೂ ಧರ್ಮಗಳ ವಿಷದ ಬೀಜ ಬಿತ್ತಲು ಸರ್ಕಾರ ಮುಂದಾಗಿರುವುದು ದುರಂತ. ಮಕ್ಕಳ ಮುಗ್ಧ ಮನಸ್ಸಿನ ಮೇಲೆ ಧರ್ಮದ ದ್ವೇಷ ಮೊಳೆಯಲು ಸರ್ಕಾರ ಶಾಲಾ ಪಠ್ಯಗಳನ್ನು ಅಸ್ತ್ರವನ್ನಾಗಿಸಿಕೊಂಡಿದೆ ಎಂದು ಖಂಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.