ADVERTISEMENT

ಪತ್ರಕರ್ತರಿಗೂ `ಯಶಸ್ವಿನಿ' ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2012, 19:59 IST
Last Updated 30 ಡಿಸೆಂಬರ್ 2012, 19:59 IST
ಸಂಘದ `ವಜ್ರ ಮಹೋತ್ಸವ'ದಲ್ಲಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಉಪಮುಖ್ಯಮಂತ್ರಿ ಆರ್.ಅಶೋಕ ಅವರೊಡನೆ ಮಾತುಕತೆಯಲ್ಲಿ ತೊಡಗಿರುವುದು. ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಚಿತ್ರದಲ್ಲಿದ್ದಾರೆ                     	 -ಪ್ರಜಾವಾಣಿ ಚಿತ್ರ

ಬೆಂಗಳೂರು: `ಪತ್ರಕರ್ತರಿಗೂ ಯಶಸ್ವಿನಿ ಯೋಜನೆಯನ್ನು ವಿಸ್ತರಿಸಲಾಗುವುದು' ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು. ನಗರದಲ್ಲಿ ಭಾನುವಾರ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ `ವಜ್ರ ಮಹೋತ್ಸವ' ಉದ್ಘಾಟಿಸಿ ಅವರು ಮಾತನಾಡಿ, ವೈದ್ಯಕೀಯ ನೆರವಿಗೆ 5 ಕೋಟಿ ರೂಪಾಯಿ ಅನುದಾನ ಮತ್ತು ಕಡಿಮೆ ಬಡ್ಡಿದರದಲ್ಲಿ ಹತ್ತು ಕೋಟಿ ರೂಪಾಯಿ ಸಾಲವನ್ನು ನೀಡಲಾಗುವುದು ಎಂದರು.  ಸಂಘದ ಅಧ್ಯಕ್ಷ ಬಿ.ಎನ್.ಶ್ರೀಧರ, ಕಾರ್ಯನಿರ್ವಾಹಕ ನಿರ್ದೇಶಕ ಸುದರ್ಶನ ಚನ್ನಂಗಿಹಳ್ಳಿ ಮತ್ತಿತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.