ADVERTISEMENT

ಪರಿಹಾರ ವಿಳಂಬ: ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2013, 19:31 IST
Last Updated 20 ಸೆಪ್ಟೆಂಬರ್ 2013, 19:31 IST
ಅರಕೆರೆ ಗ್ರಾಮದಲ್ಲಿ ಇತ್ತೀಚೆಗೆ ಈಜಲು ಹೋಗಿ ಕುಂಟೆಯಲ್ಲಿ ಮುಳುಗಿ ಮೃತಪಟ್ಟ ಬಾಲಕರ ಪೋಷಕರಿಗೆ ಪರಿಹಾರ ನೀಡಿಲ್ಲ ಹಾಗೂ ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿಲ್ಲ ಎಂದು ಆರೋಪಿಸಿ ಕಾಂಗ್ರೆಸ್‌  ಕಾರ್ಯ ಕರ್ತರು ಯಲಹಂಕದ ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು
ಅರಕೆರೆ ಗ್ರಾಮದಲ್ಲಿ ಇತ್ತೀಚೆಗೆ ಈಜಲು ಹೋಗಿ ಕುಂಟೆಯಲ್ಲಿ ಮುಳುಗಿ ಮೃತಪಟ್ಟ ಬಾಲಕರ ಪೋಷಕರಿಗೆ ಪರಿಹಾರ ನೀಡಿಲ್ಲ ಹಾಗೂ ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿಲ್ಲ ಎಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯ ಕರ್ತರು ಯಲಹಂಕದ ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು   

ಯಲಹಂಕ: ಅರಕೆರೆ ಗ್ರಾಮದಲ್ಲಿ ಇತ್ತೀಚೆಗೆ ಈಜಲು ಹೋಗಿ ಕುಂಟೆಯಲ್ಲಿ ಮುಳುಗಿ ಮೃತಪಟ್ಟ ಬಾಲಕರ ಪೋಷಕರಿಗೆ ಪರಿಹಾರ ನೀಡಿಲ್ಲ ಹಾಗೂ ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿಲ್ಲ ಎಂದು ಆರೋಪಿಸಿ ಕಾಂಗ್ರೆಸ್‌  ಕಾರ್ಯ ಕರ್ತರು ಯಲಹಂಕದ ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್‌ ಮುಖಂಡ ಗೋಪಾಲಕೃಷ್ಣ ಮಾತನಾಡಿ, ‘ಅರಕರೆ ಗ್ರಾಮದಲ್ಲಿ ಸರ್ಕಾರಿ ಶಾಲೆಯ ಇಬ್ಬರು ಬಾಲಕರು ಈಜಲು ತೆರಳಿದ್ದ ಸಂದರ್ಭದಲ್ಲಿ ಕಾಲುಜಾರಿ ನೀರಿಗೆ ಬಿದ್ದು ಮೃತಪಟ್ಟಿದ್ದರು. ಆದರೆ, ಇದುವರೆಗೂ ಒಬ್ಬ ಅಧಿಕಾರಿಯೂ ಗ್ರಾಮಕ್ಕೆ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿಲ್ಲ. ಕೂಡಲೇ ಪೋಷಕರಿಗೆ ಸೂಕ್ತ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.

ಬೆಂಗಳೂರು ಉತ್ತರ (ಹೆಚ್ಚುವರಿ) ತಾಲ್ಲೂಕು ತಹಶೀಲ್ಡಾರ್‌ ಬಾಳಪ್ಪ ಹಂದಿಗುಂದ, ‘ಮನವಿಯನ್ನು ಕೂಡಲೇ ಜಿಲ್ಲಾಧಿಕಾರಿ ಅವರಿಗೆ ತಲುಪಿಸಿ ಒಂದೆರಡು ದಿನಗಳಲ್ಲಿ ಸೂಕ್ತ ಪರಿಹಾರ ದೊರಕಿಸಿಕೊಡಲು ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ಕೆಪಿಸಿಸಿ ಸದಸ್ಯ ಸಿ.ವೆಂಕಟೇಶ್‌, ಯಲಹಂಕ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಸ್‌.ಬಿ.ಬಾಷಾ, ಎಸ್‌ಸಿ–ಎಸ್‌ಟಿ ಘಟಕದ ಅಧ್ಯಕ್ಷ ಎನ್‌.ಎಂ.ಶ್ರೀನಿವಾಸ್‌, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಕಾಂತರಾಜು, ಕಾಂಗ್ರೆಸ್‌ ಮುಖಂಡ ಕಾಕೋಳು ಲಕ್ಕಪ್ಪ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.