ADVERTISEMENT

ಪಿಡಿಒ ಹುದ್ದೆ: ಶೀಘ್ರ ಭರ್ತಿ

​ಪ್ರಜಾವಾಣಿ ವಾರ್ತೆ
Published 14 ಜುಲೈ 2012, 18:40 IST
Last Updated 14 ಜುಲೈ 2012, 18:40 IST

ಬೆಂಗಳೂರು: ರಾಜ್ಯದ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ 1,353 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಲು ಕರ್ನಾಟಕ ಲೋಕಸೇವಾ ಆಯೋಗ ನಿರ್ಧರಿಸಿದೆ.

ಪಿಡಿಒಗಳ ನೇಮಕಾತಿಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ರದ್ದಾಗಿದೆ. ಹೀಗಾಗಿ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಯಾವುದೇ ಅಡ್ಡಿ ಇಲ್ಲ. ವಾರದಲ್ಲಿ ಪರಿಷ್ಕೃತ ಸರಿ ಉತ್ತರಗಳನ್ನು ಪ್ರಕಟಿಸಲಾಗುವುದು ಎಂದು ಆಯೋಗದ ಕಾರ್ಯದರ್ಶಿ ವಿ.ಬಿ.ಪಾಟೀಲ `ಪ್ರಜಾವಾಣಿ~ಗೆ ತಿಳಿಸಿದರು.

ಆಯೋಗವು ಕಳೆದ ಡಿಸೆಂಬರ್ 18ರಂದು ಪಿಡಿಒ ಹುದ್ದೆಗಳ ಭರ್ತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿತ್ತು. ಬಳಿಕ ಪರೀಕ್ಷೆ ಬರೆದಿದ್ದ ಕೆಲವರು ಜಿಲ್ಲೆಯನ್ನು ಘಟಕವಾಗಿ ಪರಿಗಣಿಸುವ ಬದಲು ಇಡೀ ರಾಜ್ಯಕ್ಕೆ ಅನ್ವಯ ಆಗುವ ರೀತಿಯಲ್ಲಿ ನೇಮಕಾತಿ ಮಾಡಿಕೊಳ್ಳಬೇಕು ಎಂದು ನ್ಯಾಯಾಲಯದ ಮೊರೆ ಹೋಗಿ ತಡೆಯಾಜ್ಞೆ ತಂದಿದ್ದರು. ಆದರೆ ನ್ಯಾಯಾಲಯವು ಅರ್ಜಿಯನ್ನು ವಜಾ ಮಾಡಿರುವುದರಿಂದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಜಿಲ್ಲಾ ಮಟ್ಟದಲ್ಲೇ ನೇಮಕಾತಿ ನಡೆಯಲಿದೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.