ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಬಿ.ಜೆ. ಪುಟ್ಟಸ್ವಾಮಿ ಅವರು ತಮ್ಮ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಮುಖ್ಯ ಮಂತ್ರಿ ಡಿ.ವಿ.ಸದಾನಂದಗೌಡ ಅವರು ಅಂಗೀಕರಿಸಿದ್ದಾರೆ.
ರಾಜ್ಯಸಭಾ ಚುನಾವಣೆಗೆ ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಪುಟ್ಟಸ್ವಾಮಿ, ಲಾಭದಾಯಕ ಹುದ್ದೆ ಹಿನ್ನೆಲೆಯಲ್ಲಿ ಇದೇ 19ರಂದು ರಾಜೀನಾಮೆ ನೀಡಿದ್ದರು. ಶನಿವಾರ ಅವರ ರಾಜೀ ನಾಮೆ ಅಂಗೀಕರಿಸಲಾಗಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.