ಬೆಂಗಳೂರು: ಹಿರಿಯ ಹಿಂದೂಸ್ತಾನಿ ಗಾಯಕ ಪಂ.ನಾಗರಾಜರಾವ್ ಹವಾಲ್ದಾರ್ ಅವರಿಗೆ ಈ ಬಾರಿಯ ನಿರ್ಮಾಣ್ ಪುರಂದರ ಸಂಗೀತರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬನ್ನೇರುಘಟ್ಟ ಸಮೀಪದ ನಿಸರ್ಗ ಬಡಾವಣೆಯ ಪುರಂದರ ಮಂಟಪದಲ್ಲಿ ಈಚೆಗೆ ನಡೆದ ದಾಸರ ಆರಾಧನಾ ಮಹೋತ್ಸವ ಕಾರ್ಯಕ್ರಮದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಗೋಪಾಲ್ .ಬಿ. ಹೊಸೂರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ನಿರ್ಮಾಣ್ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ವಿ. ಲಕ್ಷ್ಮೀನಾರಾಯಣ ಅವರು ಮಾತನಾಡಿ, ಇಂದಿನ ಆಧುನಿಕ ಪೀಳಿಗೆಯು ತಮ್ಮಲ್ಲಿ ಉತ್ತಮ ಮೌಲ್ಯಗಳನ್ನು ರೂಢಿಸಿಕೊಳ್ಳುವಲ್ಲಿ ಪುರಂದರದಾಸರ ಸಾಹಿತ್ಯವು ಪ್ರಮುಖ ಪಾತ್ರ ವಹಿಸಬಲ್ಲದು ಎಂದರು.
ಸಂಗೀತ ವಿದ್ಯಾನಿಧಿ ವಿದ್ಯಾಭೂಷಣ ಅವರು ಮಾತನಾಡಿ, ಕರ್ನಾಟಕ ಸಂಗೀತ ಪಿತಾಮಹ ಪುರಂದರದಾಸರ ಹೆಸರಿನಲ್ಲಿ ಸಂಸ್ಥೆ ಪ್ರತಿವರ್ಷ ಆರಾಧನಾ ಮಹೋತ್ಸವದಂದು ಪ್ರಶಸ್ತಿ ನೀಡುತ್ತಿರುವುದು ಶ್ಲಾಘನೀಯ ಎಂದರು.
ದಾಸರ ಆರಾಧನೆ ಪ್ರಯುಕ್ತ ಪುರಂದರ ಮಂಟಪದಲ್ಲಿ ಶಂಕರ ಶಾನುಭಾಗ್, ವಿದ್ಯಾಭೂಷಣ, ನಾಗಮಣಿ ಶ್ರೀನಾಥ್ ಮತ್ತು ನಾಗರಾಜ್ ಹವಾಲ್ದಾರ್ ಅವರ ಗಾಯನ ಕಾರ್ಯಕ್ರಮವೂ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.