ADVERTISEMENT

ಪುರಭವನದ ಬಳಿ ಲೈಂಗಿಕ ಅಲ್ಪಸಂಖ್ಯಾತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2013, 19:30 IST
Last Updated 11 ಡಿಸೆಂಬರ್ 2013, 19:30 IST

ಬೆಂಗಳೂರು: ಸಲಿಂಗರತಿ ಶಿಕ್ಷಾರ್ಹ ಅಪರಾಧ ಎಂದು ಸುಪ್ರೀಂಕೋರ್ಟ್‌ ನೀಡಿದ ತೀರ್ಪನ್ನು ವಿರೋಧಿಸಿ ಲೈಂಗಿಕ ಅಲ್ಪಸಂಖ್ಯಾತರು ಹಾಗೂ ವಿವಿಧ ಸ್ವಯಂಸೇವಾ ಸಂಸ್ಥೆಗಳ ಸದಸ್ಯರು ನಗರದ ಪುರಭವನದ ಬಳಿ ಬುಧವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ನೂರಾರು ಮಂದಿ ಲೈಂಗಿಕ ಅಲ್ಪ­ಸಂಖ್ಯಾತರು ಸುಪ್ರೀಂಕೋರ್ಟ್‌ ತೀರ್ಪಿನ ವಿರುದ್ಧ ಘೋಷಣೆ ಕೂಗಿ­ದರು. ತಮ್ಮ ಹಕ್ಕುಗಳನ್ನು ಕಸಿದು­ಕೊಳ್ಳಲು ಯಾರಿಗೂ ಅಧಿಕಾರವಿಲ್ಲ ಎಂದು ಪ್ರತಿಭಟತಾನಿರತರು ಆಕ್ರೋಶ ವ್ಯಕ್ತಪಡಿಸಿದರು.

‘ದೆಹಲಿ ಹೈಕೋರ್ಟ್‌ 2009ರಲ್ಲಿ ಸಲಿಂಗರತಿ ಅಪರಾಧವಲ್ಲ ಎಂದು ತೀರ್ಪುಕೊಟ್ಟಿತ್ತು. ನಾಲ್ಕು ವರ್ಷಗಳ ಬಳಿಕ ಆ ತೀರ್ಪನ್ನು ಸುಪ್ರೀಂಕೋರ್ಟ್‌ ರದ್ದುಗೊಳಿಸಿ ಸಲಿಂಗರತಿ ಶಿಕ್ಷಾರ್ಹ ಅಪರಾಧ ಎಂದು ತೀರ್ಪು ನೀಡಿದೆ. ಇದು ಲೈಂಗಿಕ ಅಲ್ಪಸಂಖ್ಯಾತರ ಹಕ್ಕು­ಗಳನ್ನು ಕಸಿದುಕೊಳ್ಳುವ ಪ್ರಯತ್ನ’ ಎಂದು ರಾಜ್ಯ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆಯ ಮಲ್ಲು ಹೇಳಿದರು.

‘ತೀರ್ಪಿನ ಬಗ್ಗೆ ಸುಪ್ರೀಂಕೋರ್ಟ್‌ ಪುನರ್‌ಪರಿಶೀಲನೆ ನಡೆಸಬೇಕು. ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳನ್ನು ಕಾಯಲು ಸರ್ಕಾರ ಮುಂದಾಗಬೇಕು. ತೀರ್ಪಿನ ವಿರುದ್ಧ ರಾಜ್ಯದೆಲ್ಲೆಡೆ ಹೋರಾಟ ನಡೆಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.