ADVERTISEMENT

ಪೂರ್ಣಾವಧಿ ಪ್ರಧಾನ ಕಾರ್ಯದರ್ಶಿ ನೇಮಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2017, 19:17 IST
Last Updated 28 ಅಕ್ಟೋಬರ್ 2017, 19:17 IST

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಗೆ ತಕ್ಷಣ ಪೂರ್ಣಾವಧಿ ಪ್ರಧಾನ ಕಾರ್ಯದರ್ಶಿಯನ್ನು ನೇಮಿಸಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿಗೆ ವಿಧಾನಪರಿಷತ್‌ ಜೆಡಿಎಸ್‌ ಸದಸ್ಯ ರಮೇಶ್‌ ಬಾಬು ಮನವಿ ಸಲ್ಲಿಸಿದ್ದಾರೆ.

‘ಎಂಟು ತಿಂಗಳಿನಿಂದ ಈ ಹುದ್ದೆಯನ್ನು ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ (ಕೆಪಿಟಿಸಿಎಲ್‌) ವ್ಯವಸ್ಥಾಪಕ ನಿರ್ದೇಶಕರು ನಿಭಾಯಿಸುತ್ತಿದ್ದಾರೆ. ಕೆಪಿಟಿಸಿಎಲ್‌ನಲ್ಲಿ 70 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಇದ್ದಾರೆ. ಆ ಇಲಾಖೆ ಕಾರ್ಯಭಾರದ ಒತ್ತಡದ ಮಧ್ಯೆ ಉನ್ನತ ಶಿಕ್ಷಣ ಇಲಾಖೆ ನಿಭಾಯಿಸುವುದು ಅಷ್ಟು ಸುಲಭವಲ್ಲ’ ಎಂದು ಮನವಿಯಲ್ಲಿ ಅವರು ಅಭಿಪ್ರಾಯಪಟ್ಟಿದ್ದಾರೆ.

‘ಉನ್ನತ ಶಿಕ್ಷಣ ಇಲಾಖೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕೋಟ್ಯಂತರ ಅನುದಾನ ಸಮರ್ಪಕವಾಗಿ ಬಳಕೆಯಾಗದೆ ಉಳಿದಿದೆ. ಪೂರ್ಣಾವಧಿ ಪ್ರಧಾನ ಕಾರ್ಯದರ್ಶಿಯನ್ನು ನೇಮಿಸಿದರೆ ಇಲಾಖೆಯ ಕಾರ್ಯ ಚಟುವಟಿಕೆ ಸುಗಮವಾಗಿ ನಡೆಯಲು ಸಾಧ್ಯ’ ಎಂದು ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.