ADVERTISEMENT

ಪೊಲೀಸರ ಕಾರ್ಯ ವೈಖರಿಗೆ ತರಾಟೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2018, 19:51 IST
Last Updated 21 ಮಾರ್ಚ್ 2018, 19:51 IST

ಬೆಂಗಳೂರು: ಪ್ರಯಾಣಿಕರೊಬ್ಬರ ಮೇಲೆ ಉಬರ್ ಕ್ಯಾಬ್ ಚಾಲಕ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ, ಉಬರ್ ಇಂಡಿಯಾ ಟೆಕ್ನಾಲಜೀಸ್‌ ಪ್ರೈವೇಟ್ ಲಿಮಿಟೆಡ್‌ ಕಂಪೆನಿ ಪ್ರಧಾನ ವ್ಯವಸ್ಥಾಪಕ ಹಾಗೂ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿರುವ ಉಬರ್ ಕಾರ್ಪೊರೇಟ್‌ ಕೇಂದ್ರ ಕಚೇರಿಯ ಸಿಇಒಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

‘ಉಬರ್ ಕ್ಯಾಬ್‌ಗಳಲ್ಲಿ ಪ್ರಯಾಣಿಸುವವರಿಗೆ ಸೂಕ್ತ ರಕ್ಷಣೆ ಒದಗಿಸಲು ನಿರ್ದೇಶಿಸಬೇಕು’ ಎಂದು ಕೋರಿ ಇಂದಿರಾನಗರದ ನಿವಾಸಿ ದವೆ ಬ್ಯಾನರ್ಜಿ ಎಂಬುವರು ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಆರ್.ಎಸ್‌.ಚೌಹಾಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿ, ಪೊಲೀಸರ ಕಾರ್ಯ ವೈಖರಿಯನ್ನು ತರಾಟೆಗೆ ತೆಗೆದುಕೊಂಡರು.

‘ಯಾವುದಾದರೂ ರಾಜಕಾರಣಿಗಳ ಪಿಕ್‌ ಪಾಕೆಟ್‌ ಆದರೆ ಪೊಲೀಸರು ಆರೋಪಿಗಳನ್ನು ಎಷ್ಟು ಬೇಗ ಬಂಧಿಸುತ್ತಾರೆ. ಆದರೆ, ಈ ಪ್ರಕರಣದಲ್ಲಿ ಏಕೆ ಇಷ್ಟೊಂದು ನಿರ್ಲಕ್ಷ್ಯ ವಹಿಸಿದ್ದಾರೆ’ ಎಂದು ಪ್ರಶ್ನಿಸಿದರು.

ADVERTISEMENT

‘ಪೊಲೀಸರ ಇಂತಹ ವರ್ತನೆ ಸಾರ್ವ
ಜನಿಕರಲ್ಲಿ ಆತಂಕ ಹುಟ್ಟಿಸಿದೆ’ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.