ADVERTISEMENT

ಪ್ರಜಾವಾಣಿ, ಡೆಕ್ಕನ್ ಹೆರಾಲ್ಡ್ ನೆರವು: ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ ತರಬೇತಿ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2011, 19:50 IST
Last Updated 3 ಫೆಬ್ರುವರಿ 2011, 19:50 IST

ಬೆಂಗಳೂರು: ’ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್’ ಬಳಗವು ಮೆಡಿಕಲ್, ಎಂಜಿನಿಯರಿಂಗ್, ಕಾನೂನು ಕೋರ್ಸುಗಳ ಅಖಿಲ ಭಾರತ ಮಟ್ಟದ ಪ್ರವೇಶ ಪರೀಕ್ಷೆಗಳನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ (ಪಿಯುಸಿ ಅಥವಾ 12ನೇ ತರಗತಿ ಸಿಬಿಎಸ್‌ಇ, ಐಎಸ್‌ಸಿ) ಫೆಬ್ರುವರಿ 5ರಂದು ‘ಮಿಷನ್ ಎಡ್ಮಿಷನ್-2011’ ಕೌನ್ಸೆಲಿಂಗ್ ಕಾರ್ಯಕ್ರಮ ಹಮ್ಮಿಕೊಂಡಿದೆ.

ಇಲ್ಲಿನ ಕೆ.ಜಿ. ರಸ್ತೆಯ ಶಿಕ್ಷಕರ ಸದನದಲ್ಲಿ ಅಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಾರ್ಯಕ್ರಮ ನಡೆಯಲಿದೆ. ಈ ಬಗ್ಗೆ ಮಾಹಿತಿ ನೀಡಲು ಬೆಂಗಳೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಎನ್.ಪ್ರಭುದೇವ್, ಐಐಐಟಿಯ ನಿರ್ದೇಶಕ ಪ್ರೊ.ಸಡಗೋಪನ್, ನಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ ಕುಲಸಚಿವ ಪ್ರೊ.ವಿ.ನಾಗರಾಜ್, ಬೆಂಗಳೂರು ಮೆಡಿಕಲ್ ಕಾಲೇಜಿನ ಪ್ರಾಧ್ಯಾಪಕ ಡಾ.ಎಚ್.ವಿ.ನಟರಾಜ್, ಎಸಿಇ ಕ್ರಿಯೇಟಿವ್ ಲರ್ನಿಂಗ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಜಿ.ಶ್ರೀಧರ್, ಪ್ಯಾರಾಡಿಗ್ಮ್ ಕಾನೂನು ತರಬೇತಿ ಕೇಂದ್ರದ ಉಪನ್ಯಾಸಕಿ ಅನಿತಾ ಆಗಮಿಸುವರು.

ಪ್ರವೇಶ ಉಚಿತ. ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು. ವಿವರಗಳಿಗೆ ಹಾಗೂ ಹೆಸರು ನೋಂದಾಯಿಸಲು 25880202/216/226/225 ಅಥವಾ ಇ ಮೇಲ್- readerservicecell@deccanherald.co.in  ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.