ADVERTISEMENT

ಪ್ರಣಾಳಿಕೆ ಕಿರುಹೊತ್ತಿಗೆ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2014, 20:01 IST
Last Updated 8 ಮಾರ್ಚ್ 2014, 20:01 IST
ಲೋಕಸಭಾ ಚುನಾವಣೆಗೆ ಪ್ರಣಾಳಿಕೆ ಸಿದ್ಧಪಡಿಸಲು ರಾಜ್ಯದ ವಿವಿಧ ಕ್ಷೇತ್ರಗಳ ತಜ್ಞರಿಂದ ಸಂಗ್ರಹಿಸಿದ ಮಾಹಿತಿಯ ಕಿರುಹೊತ್ತಿಗೆಯನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಜ­ನಾಥ್‌ ಸಿಂಗ್‌ ಅವರಿಗೆ ದೆಹಲಿಯಲ್ಲಿ ಶನಿವಾರ ಹಸ್ತಾಂತರಿಸಿದರು. ಮುಖಂಡರಾದ ನಿತಿನ್ ಗಡ್ಕರಿ, ಮುರಳಿ ಮನೋಹರ ಜೋಶಿ, ಸುಷ್ಮಾ ಸ್ವರಾಜ್‌, ಎಲ್‌.ಕೆ.ಅಡ್ವಾಣಿ, ನರೇಂದ್ರ ಮೋದಿ, ಅರುಣ್‌ ಜೇಟ್ಲಿ, ಜಗದೀಶ ಶೆಟ್ಟರ್‌, ವೆಂಕಯ್ಯ ನಾಯ್ಡು, ಅನಂತಕುಮಾರ್‌ ಚಿತ್ರದಲ್ಲಿದ್ದಾರೆ

ಬೆಂಗಳೂರು: ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಏನೆಲ್ಲ ಅಂಶಗಳು ಇರಬೇಕೆಂಬ ಬಗ್ಗೆ ರಾಜ್ಯದ ವಿವಿಧ ಕ್ಷೇತ್ರಗಳ ತಜ್ಞರಿಂದ ಸಂಗ್ರಹಿಸಿದ ಮಾಹಿತಿಯ ಕಿರುಹೊತ್ತಿಗೆಯನ್ನು ರಾಜ್ಯ ಬಿಜೆಪಿ ಶನಿವಾರ ಪಕ್ಷದ ಹೈಕಮಾಂಡ್‌ಗೆ ಸಲ್ಲಿಸಿದೆ.

ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ ಅವರು ಕೇಂದ್ರ ಚುನಾವಣಾ ಸಮಿತಿಯ ಸಭೆಯಲ್ಲೇ ಪ್ರಣಾಳಿಕೆಯ ಕಿರುಹೊತ್ತಿಗೆಯನ್ನು  ರಾಷ್ಟ್ರೀಯ ಅಧ್ಯಕ್ಷ ರಾಜನಾಥಸಿಂಗ್‌, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಮುರುಳಿ ಮನೋಹರ ಜೋಶಿ, ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತಿತರರಿಗೆ ನೀಡಿದರು.

ಹೈಕಮಾಂಡ್‌ ಸಲಹೆ ಮೇರೆಗೆ ಈ ಅಭಿಪ್ರಾಯ ಸಂಗ್ರಹಿಸಲಾಗಿತ್ತು. 40ಕ್ಕೂ ಹೆಚ್ಚು ತಜ್ಞರ ಹಾಗೂ ಸಾರ್ವಜನಿಕರಿಂದ ಕ್ಷೇತ್ರವಾರು ಸಂಗ್ರಹಿಸಿದ್ದ ಅಭಿಪ್ರಾಯಗಳನ್ನು ಇದರಲ್ಲಿ ಸೇರಿಸಲಾಗಿದೆ ಎಂದು ಪ್ರಣಾಳಿಕೆ ಪ್ರಕೋಷ್ಠದ ರಾಷ್ಟ್ರೀಯ ಸಹ ಸಂಚಾಲಕ ಎಂ.ಎಚ್.ಶ್ರೀಧರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.