ADVERTISEMENT

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2017, 20:02 IST
Last Updated 11 ಡಿಸೆಂಬರ್ 2017, 20:02 IST
ತರಳಬಾಳು ಸ್ವಾಮೀಜಿ ಅವರೊಂದಿಗೆ ಕೊಂಡಜ್ಜಿ ಷಣ್ಮುಖಪ್ಪ ಚರ್ಚಿಸಿದರು. ಶಾಸಕ ಶಾಮನೂರು ಶಿವಶಂಕರಪ್ಪ ಅವರೊಂದಿಗೆ ಕೊಂಡಜ್ಜಿ ಮೋಹನ್‌ ಮಾತುಕತೆ ನಡೆಸಿದರು. ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಇದ್ದಾರೆ. –ಪ್ರಜಾವಾಣಿ ಚಿತ್ರ
ತರಳಬಾಳು ಸ್ವಾಮೀಜಿ ಅವರೊಂದಿಗೆ ಕೊಂಡಜ್ಜಿ ಷಣ್ಮುಖಪ್ಪ ಚರ್ಚಿಸಿದರು. ಶಾಸಕ ಶಾಮನೂರು ಶಿವಶಂಕರಪ್ಪ ಅವರೊಂದಿಗೆ ಕೊಂಡಜ್ಜಿ ಮೋಹನ್‌ ಮಾತುಕತೆ ನಡೆಸಿದರು. ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಇದ್ದಾರೆ. –ಪ್ರಜಾವಾಣಿ ಚಿತ್ರ   

ಬೆಂಗಳೂರು: ಕೊಂಡಜ್ಜಿ ಬಸಪ್ಪ ಅವರ ಜನ್ಮಶತಮಾನೋತ್ಸವದ ಅಂಗವಾಗಿ ನಗರದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಸ್ಕೌಟ್ಸ್‌ ಮತ್ತು ಗೈಡ್ಸ್‌ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರನ್ನು ಸನ್ಮಾನಿಸಲಾಯಿತು.

ಸ್ಕೌಟ್ಸ್‌ ಮತ್ತು ಗೈಡ್ಸ್‌ನ ನೂರು ವಿದ್ಯಾರ್ಥಿಗಳು ದೀಪ ಬೆಳಗಿಸಿದರು. ಶಾಸಕ ಶಾಮನೂರು ಶಿವಶಂಕರಪ್ಪ ಅವರು ಕೊಂಡಜ್ಜಿ ಬಸಪ್ಪ ಅವರ ಭಾವಚಿತ್ರವನ್ನು ಅನಾವರಣಗೊಳಿಸಿದರು.

ತರಳಬಾಳು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ಬಸಪ್ಪ ಅವರು ಸ್ಕೌಟ್ಸ್‌ ಮತ್ತು ಗೈಡ್ಸ್‌ನಲ್ಲಿ ಅಗಾಧ ಸೇವೆ ಸಲ್ಲಿಸಿದ್ದಾರೆ.  ಅವರು ಸಜ್ಜನ ರಾಜಕಾರಣಿಯಾಗಿದ್ದರು, ಅವರದ್ದು ಸರಳ ವ್ಯಕ್ತಿತ್ವ. ಸಮೂಹ ಅಭಿವೃದ್ಧಿ ಅವರ ಗುರಿಯಾಗಿತ್ತು’ ಎಂದರು.

ADVERTISEMENT

ಸಚಿವ ಯು.ಟಿ ಖಾದರ್‌, ‘ಹವಾನಿಯಂತ್ರಿತ ಕೊಠಡಿಯಲ್ಲಿ ಕುಳಿತುಕೊಳ್ಳುವ ಅಧಿಕಾರಿಗಳು ಹಾಗೂರಾಜಕಾರಣಿಗಳು ಬಲಿಷ್ಠರಾದರೆ ದೇಶ ಬಲಿಷ್ಠವಾಗುವುದಿಲ್ಲ. ಬದಲಾಗಿ ವಿದ್ಯಾರ್ಥಿಗಳು ಬಲಿಷ್ಠರಾಗಬೇಕು ಆಗ ಮಾತ್ರ ದೇಶ ಸದೃಢವಾಗುತ್ತದೆ’ ಎಂದರು. ಸ್ಕೌಟ್ಸ್‌ ಮತ್ತು ಗೈಡ್ಸ್‌ನಲ್ಲಿದ್ದು ಎಸ್‌ಎಸ್‌ಎಲ್‌ಸಿಯಲ್ಲಿ ಶೇ95ಕ್ಕಿಂತ ಅಧಿಕ ಅಂಕ ಗಳಿಸಿದ 250 ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.