ADVERTISEMENT

ಪ್ರತಿಭೆ ಗುರುತಿಸುವುದು ಶಿಕ್ಷಕರ ಹೊಣೆ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2012, 19:25 IST
Last Updated 2 ಮಾರ್ಚ್ 2012, 19:25 IST

ಕೃಷ್ಣರಾಜಪುರ: ಸಮಾಜದ ಕಟ್ಟ ಕಡೆಯ ಮಗು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ದೃಷ್ಟಿಯಿಂದ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ವಿಶೇಷವಾಗಿ ಆದ್ಯತೆ ನೀಡಿದೆ. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಹಂತದಲ್ಲಿಯೇ ಮಕ್ಕಳ ಪ್ರತಿಭೆ ಗುರುತಿಸುವುದು ಶಿಕ್ಷಕರ ಹೊಣೆ ಎಂದು ಪಾಲಿಕೆ ಸದಸ್ಯೆ ಕೆ.ಪೂರ್ಣಿಮಾ ಹೇಳಿದರು.

ದೇವಸಂದ್ರ ಸರ್ಕಾರಿ ಶಾಲೆಯ ಆವರಣದಲ್ಲಿ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಬಿಬಿಎಂಪಿ ಕೈಗೆತ್ತಿಕೊಂಡಿರುವ ನಾಲ್ಕು ಹೆಚ್ಚುವರಿ ಕೊಠಡಿಗಳಿಗೆ ಗುದ್ದಲಿ ಪೂಜೆ ಮತ್ತು ಸರ್ವ ಶಿಕ್ಷಣ ಅಭಿಯಾನದಡಿ ನಿರ್ಮಿಸಿದ ಒಂದು ಹೆಚ್ಚುವರಿ ಕೊಠಡಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಾಲಾ ಅಭಿವೃದ್ಧಿ ಸಮಿತಿಯು ಎದುರಿಸುತ್ತಿರುವ ಸಮಸ್ಯೆಗಳನ್ನು ಮುಂದಿಟ್ಟಿದೆ. 2-3 ತಿಂಗಳ ಒಳಗೆ ಬಗೆಹರಿಸಲಾಗುವುದು. ಕುಡಿಯುವ ನೀರು, ಶೌಚಾಲಯ ಮತ್ತು ಕಾಂಪೌಂಡ್ ನಿರ್ಮಾಣ ಸೇರಿದಂತೆ ಇತರೆ ಸೌಲಭ್ಯಗಳನ್ನು ಸ್ವಂತ ಖರ್ಚಿನಿಂದ ಒದಗಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸತೀಶ್, ಬಿಬಿಎಂಪಿ ಸಹಾಯಕ ಎಂಜಿನಿಯರ್ ಸುರೇಶ್, ಮುಖ್ಯ ಶಿಕ್ಷಕಿ ಶಂಕರಮ್ಮ, ಮುಖಂಡ ಟಿ.ಕೃಷ್ಣಪ್ಪ, ಕೆ.ಮುನಿಸ್ವಾಮಿ, ಬ್ಯಾಂಕ್ ಮುನಿರಾಜು, ವೆಂಕಟೇಶ್, ಶಾಂತಕುಮಾರಿ ,ಕಲಾ, ಸಾಕಮ್ಮ, ರತ್ನ ಸೇರಿದಂತೆ ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.