ADVERTISEMENT

ಪ್ರತ್ಯೇಕ ನ್ಯಾಯಪೀಠ ರಚನೆ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2018, 20:22 IST
Last Updated 13 ಮಾರ್ಚ್ 2018, 20:22 IST

ಬೆಂಗಳೂರು: ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆಯನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಸಲ್ಲಿಸಲಾಗಿರುವ ನೂರಕ್ಕೂ ಅಧಿಕ ಅರ್ಜಿಗಳ ವಿಚಾರಣೆಗೆ ‍ಪ್ರತ್ಯೇಕ ನ್ಯಾಯಪೀಠ ರಚಿಸಲಾಗಿದೆ.

ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠ ಈ ಅರ್ಜಿಗಳ ವಿಚಾರಣೆ ನಡೆಸಲಿದೆ.

ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಲು ಹಾಗೂ ಒತ್ತುವರಿದಾರರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಚಿಸಲಾಗಿರುವ ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ ರದ್ದುಗೊಳಿಸಬೇಕೆಂಬುದು ಅರ್ಜಿದಾರರ ಕೋರಿಕೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.