ADVERTISEMENT

ಪ್ರಬಂಧಗಳಿಗೆ ಆಹ್ವಾನ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2012, 19:30 IST
Last Updated 7 ಮಾರ್ಚ್ 2012, 19:30 IST

ಬೆಂಗಳೂರು: ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ಬೆಂಗಳೂರು ವಿಶ್ವವಿದ್ಯಾಲಯವು ಮಾರ್ಚ್ 27 ಮತ್ತು 28ರಂದು `ಭಾರತೀಯ ರಂಗಭೂಮಿಯಲ್ಲಿ ಪುರಾಣ ಮತ್ತು ಸಾಂಪ್ರದಾಯಿಕ ಆಚರಣೆಗಳು~ ಕುರಿತು ರಾಷ್ಟೀಯ ವಿಚಾರ ಸಂಕಿರಣಕ್ಕೆ ಸಂಶೋಧಕರು, ಉಪನ್ಯಾಸಕರು ಮತ್ತು ಸಂಶೋಧನಾ ವಿದ್ಯಾರ್ಥಿಗಳಿಂದ ಪ್ರಬಂಧಗಳನ್ನು ಆಹ್ವಾನಿಸಲಾಗಿದೆ.

ಕನ್ನಡ ರಂಗಭೂಮಿಯಲ್ಲಿ ಆಧುನಿಕತೆ ಮತ್ತು ಪುರಾಣ, ಚಂದ್ರಶೇಖರ ಕಂಬಾರ, ಗಿರೀಶ್ ಕಾರ್ನಾಡ್ ಮತ್ತು ಎಚ್.ಎಸ್.ಶಿವಪ್ರಕಾಶ ಅವರ ನಾಟಕಗಳಲ್ಲಿ ಪುರಾಣ ಮತ್ತು ಸಂಪ್ರದಾಯಿಕ ಆಚರಣೆಗಳು ಮತ್ತು ಕನ್ನಡ ರಂಗಭೂಮಿಯಲ್ಲಿ ಆಧುನಿಕತೆ ಮತ್ತು ಪುರಾಣ ವಿಷಯಗಳನ್ನೊಳಗೊಂಡ  ಪ್ರಬಂಧಗಳನ್ನು ಮಂಡಿಸಲು ಸಂಶೋಧನಾ ವಿದ್ಯಾರ್ಥಿಗಳಿಗೆ 10 ನಿಮಿಷ ಮತ್ತು ಇತರರಿಗೆ 20ನಿಮಿಷ ಕಾಲಾವಧಿ ನಿಗದಿಪಡಿಸಲಾಗಿದೆ. ಹೆಸರು ನೋಂದಾಯಿಸಲು ಮಾರ್ಚ್ 20 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 22961708.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.