ADVERTISEMENT

ಪ್ರವಾಸಿ ಬಸ್‌ಗಳಿಗೆ ವೇಗ ನಿಯಂತ್ರಕ ಇಲ್ಲ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2013, 19:30 IST
Last Updated 3 ಡಿಸೆಂಬರ್ 2013, 19:30 IST

ಬೆಂಗಳೂರು: ರಾಜ್ಯ ಮತ್ತು ಅಂತರ­ರಾಜ್ಯ ರಹದಾರಿ ಬಸ್‌ಗಳಿಗೆ ವೇಗ ನಿಯಂತ್ರಕ (ಸ್ಪೀಡ್‌ ಗವರ್ನರ್‌) ಅಳವಡಿಸುವುದರಿಂದ ವಿನಾಯಿತಿ ನೀಡಲಾಗಿದೆ.

ಕೇಂದ್ರ ಭೂಸಾರಿಗೆ ಸಚಿವಾ­ಲಯದ ಅಧಿಸೂಚನೆಯನ್ನು ಆಧಾರ­ವಾಗಿ ಇಟ್ಟುಕೊಂಡು ರಾಜ್ಯ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. 

ರಾಜ್ಯ, ರಾಷ್ಟ್ರೀಯ ಮತ್ತು ಅಖಿಲ ಭಾರತ ಪ್ರವಾಸಿ ಪರವಾನಗಿ ಪಡೆದಿರುವ ವಾಹನಗಳಿಗೆ ವೇಗ ನಿಯಂತ್ರಕ ಅಳವಡಿಸಬೇಕಾಗಿಲ್ಲ. ಕೇಂದ್ರ ಸರ್ಕಾರದ ಅಧಿಸೂಚನೆ ಪ್ರಕಾರ ಏಪ್ರಿಲ್‌ 1ರಿಂದ ಇಡೀ ದೇಶದಲ್ಲಿ ಇದು ಜಾರಿಗೆ ಬರಲಿದೆ. ಆದರೆ, ರಾಜ್ಯಸಾರಿಗೆ ಇಲಾಖೆ ಡಿ.1ರಿಂದಲೇ ಇದನ್ನು ಜಾರಿಗೊಳಿಸಿ ಆದೇಶ ಹೊರಡಿಸಿದೆ.

ತ್ರಿಚಕ್ರ ವಾಹನಗಳು, 3.5 ಟನ್‌ಗಿಂತ ಕಡಿಮೆ ಭಾರದ ವಾಹನ­ಗಳು (ಟ್ಯಾಕ್ಸಿಗಳು), ಅಗ್ನಿಶಾಮಕ ವಾಹನಗಳು, ಆಂಬುಲೆನ್ಸ್‌, ಪೊಲೀಸ್‌ ವಾಹನಗಳು ವೇಗ ನಿಯಂತ್ರಕಗಳನ್ನು ಅಳವಡಿಸಿ­ಕೊಳ್ಳಬೇಕಾಗಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.