ADVERTISEMENT

ಪ್ರವೇಶ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2012, 19:30 IST
Last Updated 16 ಏಪ್ರಿಲ್ 2012, 19:30 IST

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯದ ಆಶ್ರಯದಲ್ಲಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಪ್ರತಿಷ್ಠಿತ ಶಾಲೆಗಳಲ್ಲಿ 6 ಮತ್ತು 8 ನೇ ತರಗತಿಗಳಿಗೆ ಪ್ರವೇಶ ಕಲ್ಪಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಅಭ್ಯರ್ಥಿಗಳು 2011-12 ನೇ ಸಾಲಿನಲ್ಲಿ 5 ಮತ್ತು 7ನೇ ತರಗತಿ ಪರೀಕ್ಷೆಯಲ್ಲಿ ಶೇ 60 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರಬೇಕು. ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾ ಶಿಕ್ಷಣ ತರಬೇತಿ ಕೇಂದ್ರ (ಡಯಟ್) ನಡೆಸುವ ಪ್ರವೇಶ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಶುಚಿತ್ವ ವೃತ್ತಿಯಲ್ಲಿ ತೊಡಗಿರುವ ಪ.ಜಾ/ಪಂಗಡದ ಪೋಷಕರ ಮಕ್ಕಳಿಗೆ ಆದ್ಯತೆ ನೀಡಲಾಗುವುದು.

ಪೋಷಕರ ವಾರ್ಷಿಕ ಆದಾಯ ರೂ 75 ಸಾವಿರಕ್ಕಿಂತ ಕಡಿಮೆ ಇರಬೇಕು. ವಿದ್ಯಾರ್ಥಿ 5ನೇ ತರಗತಿ/7ನೇ ತರಗತಿಯ ಮೂಲ ಅಂಕಪಟ್ಟಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕು.

ಅರ್ಜಿ ನಮೂನೆಯೊಂದಿಗೆ ವಿದ್ಯಾರ್ಥಿಯ ಇತ್ತೀಚಿನ ಎರಡು (ಬಣ್ಣದ) ಭಾವಚಿತ್ರಗಳು ಇರಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿಗಳು ಅಥವಾ ಕ್ಷೇತ್ರ ಶಿಕ್ಷಣ ಅಧಿಕಾರಿಗಳಿಗೆ ಇದೇ 25 ರೊಳಗೆ ಸಲ್ಲಿಸಬೇಕು ಎಂದು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಯವರ ಪ್ರಕಟಣೆ ತಿಳಿಸಿದೆ.

ವಿವರಗಳಿಗೆ: ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ, ಬೆಂಗಳೂರು ನಗರ ಜಿಲ್ಲೆ, 4ನೇ ಮುಖ್ಯ ರಸ್ತೆ, 16 ನೇ ಅಡ್ಡ ರಸ್ತೆ, ಸಂಪಂಗಿರಾಮನಗರ (ಪೊಲೀಸ್ ಠಾಣೆ ಎದುರು). ದೂರವಾಣಿ-2224 0448.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.