
ಪ್ರಜಾವಾಣಿ ವಾರ್ತೆಬೆಂಗಳೂರು: ಪ್ರಥಮ ದರ್ಜೆ ಸಹಾಯಕರ ಪರೀಕ್ಷೆಯಲ್ಲಿ (ಎಫ್‌ಡಿಎ) ಅವ್ಯವಹಾರ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಬಿ.ವಿ.ಕೃಷ್ಣಪ್ಪ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಇಲಾಖಾ ವಿಚಾರಣೆ ಕಾಯ್ದಿರಿಸಿ ಅಮಾಣತು ಮಾಡಲಾಗಿದೆ. ಜೂನ್ 19ರಂದು ನಡೆದ ಎಫ್‌ಡಿಎ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ರೇಷ್ಮೆ ಕೃಷಿ ಉಪನ್ಯಾಸಕ ರಹಮತ್ ಉಲ್ಲಾ, ಎಫ್‌ಡಿಎ ಕೆ.ಎನ್.ರಾಮಸ್ವಾಮಿ ಅವರನ್ನು ಈ ಹಿಂದೆ ಅಮಾನತುಗೊಳಿಸಲಾಗಿತ್ತು. ಜಿಲ್ಲಾಧಿಕಾರಿ ವರದಿ ಅನ್ವಯ ಪ್ರಾಂಶುಪಾಲರನ್ನು ಈಗ ಅಮಾನತುಗೊಳಿಸಲಾಗಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.