ADVERTISEMENT

ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2014, 19:30 IST
Last Updated 4 ಮಾರ್ಚ್ 2014, 19:30 IST

ಯಲಹಂಕ: ಯಲಹಂಕ ಕ್ಷೇತ್ರದಲ್ಲಿ ಸಾರ್ವಜನಿಕ  ಕಟ್ಟಡ ನಿರ್ಮಾಣಕ್ಕೆ ₨ 2 ಕೋಟಿ ಅನುದಾನ ನೀಡಲಾ ಗುವುದು ಎಂದು  ಮೇಯರ್‌ ಕಟ್ಟೆ ಸತ್ಯನಾರಾಯಣ ಭರವಸೆ ನೀಡಿ ದರು.

ಅಟ್ಟೂರು ವಾರ್ಡ್‌ ವ್ಯಾಪ್ತಿಯ ಚಿಕ್ಕಬೆಟ್ಟಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಉದ್ಘಾಟಿ ಸಿದರು.
ನಗರ ಉತ್ತಮ ರೀತಿಯಲ್ಲಿ ಅಭಿವೃದ್ಧಿಯಾಗಿದೆ. ಆದರೆ, ಹೊರವಲಯವು ಮೂಲಸೌಕರ್ಯ ಗಳ ಕೊರತೆಯನ್ನು ಎದುರಿ ಸುತ್ತಿದೆ ಎಂದು ಹೇಳಿದರು.

ಶಾಸಕ ಎಸ್‌.ಆರ್‌.ವಿಶ್ವನಾಥ್‌ ಮಾತನಾಡಿ, ಈ ಭಾಗದಲ್ಲಿ ಬಡಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಈ ಕೇಂದ್ರವನ್ನು ತೆರೆಯಲಾಗಿದ್ದು, ಸಾರ್ವಜನಿಕರು ಸದುಪಯೋಗಪ ಡಿಸಿಕೊಳ್ಳಬೇಕು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.