ADVERTISEMENT

‘ಪ್ರಾದೇಶಿಕ ಪಕ್ಷಗಳಿಗೆ ಮಾನ್ಯತೆ ನೀಡಿ'

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2018, 19:56 IST
Last Updated 23 ಮಾರ್ಚ್ 2018, 19:56 IST

ಬೆಂಗಳೂರು‌: ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಪ್ರಾದೇಶಿಕ ಪಕ್ಷಗಳಿಗೆ ಹೆಚ್ಚು ಮಾನ್ಯತೆ ನಿಡಬೇಕು ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಮನವಿ ಮಾಡಿದರು.

ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಾದ್ಯಂತ ಕನ್ನಡಪರ ಸಂಘಟನೆಗಳು ಒಟ್ಟಾಗಿ ಮುಂಬರುವ ಚುನಾವಣೆ ಎದುರಿಸಬೇಕು. ರಾಷ್ಟ್ರೀಯ ಪಕ್ಷಗಳು ರಾಜ್ಯದ ಹಿತ ಕಾಪಾಡುವಲ್ಲಿ ವಿಫಲವಾಗಿವೆ. ಎಲ್ಲಾ ಪಕ್ಷಗಳು ಕೇಂದ್ರದ ಕಪಿಮುಷ್ಟಿಯಲ್ಲಿದ್ದು ತಾಳಕ್ಕೆ ಕುಣಿಯುತ್ತಿವೆ’ ಎಂದು ಕಿಡಿಕಾರಿದರು.

‘ಎಲ್ಲಾ ಕನ್ನಡಪರ ಸಂಘಟನೆಗಳು ಒಂದಾಗಬೇಕು. ಕನ್ನಡ ಚಳವಳಿ ವಾಟಾಳ್‌ ಪಕ್ಷ ಎಲ್ಲರನ್ನೂ ಒಳಗೊಂಡ ಪ್ರಾದೇಶಿಕ ಪಕ್ಷ ಸ್ಥಾಪಿಸಲು ಮುಂದಾ
ಗಿದೆ. ಈ ಚುನಾವಣೆಯಲ್ಲಿ ಕನಿಷ್ಠ 100 ಮಂದಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಉದ್ದೇಶವಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.