ADVERTISEMENT

`ಪ್ರಾಮಾಣಿಕತೆಯಿಂದ ಜನಸೇವೆ'

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2013, 19:59 IST
Last Updated 2 ಸೆಪ್ಟೆಂಬರ್ 2013, 19:59 IST

ತಲಘಟ್ಟಪುರ:  `ಜನಪ್ರತಿನಿಧಿಗಳು, ಅಧಿಕಾರಿಗಳು ನಿಷ್ಠೆ, ಪ್ರಾಮಾಣಿಕತೆಯಿಂದ ಜನಸೇವೆ ಮಾಡಿದಾಗ ಸರ್ಕಾರಕ್ಕೆ ಉತ್ತಮ ಹೆಸರು ಬರುತ್ತದೆ' ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಕನಕಪುರ ರಸ್ತೆಯ ತಾಲ್ಲೂಕು ಪಂಚಾಯ್ತಿ ಆವರಣದಲ್ಲಿ ನಿರ್ಮಿಸಿರುವ ಜನಪ್ರತಿನಿಧಿಗಳ ವಿಶ್ರಾಂತಿ ಗೃಹವನ್ನು ಉದ್ಘಾಟಿಸಿ ಮಾತನಾಡಿದರು.

`ನಗರ ಜಿಲ್ಲಾ ವ್ಯಾಪ್ತಿಯಲ್ಲಿ ನೂರಾರು ಖಾಸಗಿ ಬಡಾವಣೆಗಳು ನಿರ್ಮಾಣವಾಗಿದ್ದು ನಾಗರಿಕ ಸೌಲಭ್ಯ ನೀಡಲು ತೊಂದರೆಯಾಗಿದೆ.

ಸರ್ಕಾರದಿಂದ ವಿಶೇಷ ಅನುದಾನ ಬಿಡುಗಡೆ ಮಾಡಬೇಕು' ಎಂದು ಶಾಸಕರಾದ ಎಸ್.ಟಿ.ಸೋಮಶೇಖರ್, ಎಸ್.ಆರ್.ವಿಶ್ವನಾಥ್ ಒತ್ತಾಯಿಸಿದರು. ಜಿ. ಪಂ ಉಪಕಾರ್ಯದರ್ಶಿ ಎಂ.ಜಿ.ಶಿವಲಿಂಗಯ್ಯ, ಎಇ ಎಚ್.ಎಸ್.ಪ್ರಸನ್ನಕುಮಾರ್, ಎಂ.ನಾಗರಾಜು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.