ADVERTISEMENT

ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿ: ಸಚಿವ ರೆಡ್ಡಿ

​ಪ್ರಜಾವಾಣಿ ವಾರ್ತೆ
Published 7 ಜನವರಿ 2014, 20:11 IST
Last Updated 7 ಜನವರಿ 2014, 20:11 IST

ಬೆಂಗಳೂರು: ‘ಸಾರಿಗೆ ಸಂಸ್ಥೆಗಳಲ್ಲಿ ಉದ್ಯೋಗ ಮಾಡುತ್ತಿರುವ ಎಲ್ಲ ವರ್ಗದ ಜನರಿಗೆ ನ್ಯಾಯ ಒದಗಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಕಾರ್ಮಿಕರು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿದರೆ ಸಾರಿಗೆ ಸಂಸ್ಥೆಗಳು ಲಾಭದ ಹಾದಿಯಲ್ಲಿ ಮುನ್ನಡೆಯ­ಲಿವೆ’ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಕೆಎಸ್‌ಆರ್‌ಟಿಸಿ ನಿಗಮಗಳ ಪರಿ­ಶಿಷ್ಟ ಜಾತಿ ಹಾಗೂ ಪಂಗಡಗಳ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಪುರಭವನದಲ್ಲಿ ಮಂಗಳವಾರ ನಡೆದ ಸಂಘದ ಎರಡನೇ ವಾರ್ಷಿಕೋತ್ಸವ ಹಾಗೂ ‘ಪಾರಿಜಾತ’ ವಾರ್ಷಿಕ ಡೈರಿ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಮಾಜ ಕಲ್ಯಾಣ ಸಚಿವ ಆಂಜನೇಯ ಮಾತನಾಡಿ, ‘ಕೆಎಸ್‌ ಆರ್‌ಟಿಸಿಯಲ್ಲಿ 1992ರ ನೇಮಕಾತಿ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಅನ್ಯಾಯವಾಗಿದೆ ಎಂಬ ಬಗ್ಗೆ ಮನವಿ ಬಂದಿದೆ. ಈ ಬಗ್ಗೆ ಸಾರಿಗೆ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜೊತೆಗೆ ಸಮಾಲೋಚಿಸಿ ಪರಿಹರಿಸ ಲಾಗುವುದು’ ಎಂದು ಭರವಸೆ ನೀಡಿದರು.

ಕೆಎಸ್‌ಆರ್‌ಟಿಸಿ ಪ್ರಧಾನ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ.ಯಲ್ಲಪ್ಪ ಕೆ.ಕೆ.ಪುರ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.