ADVERTISEMENT

ಪ್ರೌಢಶಾಲಾ ವಿದ್ಯಾರ್ಥಿಗಳಿೆಗೆ ಪ್ರಬಂಧ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2012, 19:30 IST
Last Updated 19 ಆಗಸ್ಟ್ 2012, 19:30 IST

ಬೆಂಗಳೂರು: ಕೇಂದ್ರೀಯ ಕನ್ನಡ ಅಧ್ಯಾಪಕರ ಸಂಘವು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ `ರಾಷ್ಟ್ರೀಯ ಭಾವೈಕ್ಯದ ಅಗತ್ಯತೆ: ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ~ ಕುರಿತು ಪ್ರಬಂಧರಚನೆ ಸ್ಪರ್ಧೆಯನ್ನು ಹಮ್ಮಿಕೊಂಡಿದೆ.

ಇದರೊಂದಿಗೆ ಯಾವುದೇ ಕ್ಷೇತ್ರದ ಸಾಹಿತ್ಯ, ಶಿಕ್ಷಣ, ಸಿನಿಮಾ, ಕ್ರೀಡೆ, ವಿಜ್ಞಾನಕ್ಕೆ ಸಂಬಂಧಪಟ್ಟಂತೆ ಸ್ವರಚಿತ ಕವನ ಸ್ಪರ್ಧೆಗಳನ್ನು ಆಯೋಜಿಸಿದೆ. ಆಸಕ್ತರು ಭಾಗವಹಿಸಬಹುದು. ವಿಜೇತರಿಗೆ ಪ್ರಶಸ್ತಿ ಪತ್ರ ಹಾಗೂ ಸೂಕ್ತ ಬಹುಮಾನ ದೊರೆಯಲಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನಾಂಕ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ- ಕೇಂದ್ರಿಯ ಕನ್ನಡ ಅಧ್ಯಾಪಕರ ಸಂಘ, ವಿದ್ಯಾಲಯ ನಂ. 4, ಕೆ.ಆರ್.ರಸ್ತೆ, ಶಂಕರಪುರ. ಮೊಬೈಲ್- 9480 12269.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.