ADVERTISEMENT

ಫಾರೂಕ್ ನ್ಯಾಯಾಂಗ ಬಂಧನ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2012, 19:30 IST
Last Updated 21 ಏಪ್ರಿಲ್ 2012, 19:30 IST

ಬೆಂಗಳೂರು: ಹೆಣ್ಣು ಮಗು ಎಂಬ ಕಾರಣಕ್ಕೆ ಮೂರು ತಿಂಗಳ ಮಗು ನೇಹಾ ಆಫ್ರಿನ್‌ಳನ್ನು ಕೊಲೆ ಮಾಡಿದ ಆರೋಪಿ ಉಮರ್ ಫಾರೂಕ್‌ನ ನ್ಯಾಯಾಂಗ ಬಂಧನವನ್ನು ಮೇ.5ರ ವರೆಗೆ ವಿಸ್ತರಿಸಿ ನ್ಯಾಯಾಲಯ ಆದೇಶ ನೀಡಿದೆ.

ಕಾಡುಗೊಂಡನಹಳ್ಳಿ ಠಾಣೆ ಪೊಲೀಸರು ಏ.8 ರಂದು ಪಾರೂಕ್‌ನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
 
ಆತನ ಬಂಧನದ ಅವಧಿಯನ್ನು ಮೇ.5ರ ವರೆಗೆ ವಿಸ್ತರಿಸಿ ನಗರದ 11ನೇ ಎಸಿಎಂಎಂ ನ್ಯಾಯಾಲಯ ಆದೇಶ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.