ADVERTISEMENT

ಬಂಜಾರ ಭಾಷೆ: 8ನೆಯ ಪರಿಚ್ಛೇದಕ್ಕೆ ಸೇರಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2012, 19:30 IST
Last Updated 7 ಮಾರ್ಚ್ 2012, 19:30 IST

ಬೆಂಗಳೂರು: ಬಂಜಾರ ಭಾಷೆಯನ್ನು ಸಂವಿಧಾನದ ಎಂಟನೆಯ ಪರಿಚ್ಛೇದದಲ್ಲಿ ಸೇರಿಸಬೇಕು ಎಂದು ಇತ್ತೀಚೆಗೆ ನಗರದಲ್ಲಿ ನಡೆದ ಬಂಜಾರ ಭಾಷಾ ಸಮಾವೇಶದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ರಾಷ್ಟ್ರ ಮಟ್ಟದಲ್ಲಿ ಬಂಜಾರ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಸ್ಥಾಪಿಸಬೇಕು. ಕೇಂದ್ರ ಸಾಹಿತ್ಯ ಅಕಾಡೆಮಿಯು ಬಂಜಾರ ಭಾಷೆಯ ಬರಹಗಾರರು ಮತ್ತು ವಿದ್ವಾಂಸರನ್ನು ಗುರುತಿಸುವ ಕೆಲಸ ಮಾಡಬೇಕು ಎಂದು ಸಮಾವೇಶ ನಿರ್ಣಯ ತೆಗೆದುಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.