ADVERTISEMENT

ಬಟ್ಟೆ ಅಂಗಡಿಯಲ್ಲಿ ಬೆಂಕಿ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2011, 19:50 IST
Last Updated 21 ಫೆಬ್ರುವರಿ 2011, 19:50 IST

ಬೆಂಗಳೂರು: ಚಿಕ್ಕಪೇಟೆಯ ಅವೆನ್ಯೂ ರಸ್ತೆಯಲ್ಲಿರುವ ಬೈರಪ್ಪ ಸಿಲ್ಕ್ಸ್ ಎಂಬ ಬಟ್ಟೆ ಮಾರಾಟ ಮಳಿಗೆಯಲ್ಲಿ ಸೋಮವಾರ ಸಂಜೆ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆಗಳು ಸುಟ್ಟು ಹೋಗಿವೆ.

ಮಳಿಗೆಯ ಒಳಗೆ ಸಂಜೆ 5.30ರ ಸುಮಾರಿಗೆ ಬೆಂಕಿ ಹೊತ್ತಿಕೊಂಡು ಹೊಗೆ ಬರಲಾರಂಭಿಸಿತು. ಇದರಿಂದ ಆತಂಕಗೊಂಡ ಮಳಿಗೆ ಸಿಬ್ಬಂದಿ ಹೊರಗೆ ಓಡಿ ಬಂದು ಪ್ರಾಣಾಪಾಯದಿಂದ ಪಾರಾದರು. ಏಳು ವಾಹನಗಳಲ್ಲಿ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಒಂದು ತಾಸಿಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು.ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಅಂಗಡಿಯ ಒಳ ಭಾಗದಲ್ಲಿ ಬೆಂಕಿ ಹೊತ್ತಿಕೊಂಡು ಈ ದುರ್ಘಟನೆ ನಡೆದಿದೆ. ನಷ್ಟದ ವಿವರ ಸಿಕ್ಕಿಲ್ಲ.

ಗಾಂಜಾ ಮಾರಾಟ ಬಂಧನ: ಗಾಂಜಾ ಮಾರಾಟ ಮಾಡುತ್ತಿದ್ದ ಜಗಜೀವನ್‌ರಾಂ ನಗರದ ಅನ್ವರ್ (25) ಎಂಬಾತನನ್ನು ಬಂಧಿಸಿರುವ ಪೊಲೀಸರು ಮೂರು ಲಕ್ಷ ರೂಪಾಯಿ ಮೌಲ್ಯದ 51 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಆರೋಪಿಯು ನೂರ್‌ಜಾನ್ ಎಂಬ ಮಹಿಳೆಯ ಜತೆ ಸೇರಿಕೊಂಡು ಆಂಧ್ರಪ್ರದೇಶದ ಚಿತ್ತೂರಿನಿಂದ ಗಾಂಜಾ ತರುತ್ತಿದ್ದ. ಮಹಿಳೆ ತಲೆಮರೆಸಿಕೊಂಡಿದ್ದಾಳೆ.

ಬಳಿಕ 10 ಗ್ರಾಂ ತೂಕದ ಪ್ಯಾಕೆಟ್‌ಗಳನ್ನಾಗಿ ಮಾಡಿ 50ರಿಂದ 100 ರೂಪಾಯಿಗೆ ಕೆಂಪಾಪುರ ಅಗ್ರಹಾರ, ಗೋಪಾಲಪುರ ಮತ್ತು ಶಾಮಣ್ಣ ಗಾರ್ಡನ್‌ನಲ್ಲಿ ಕಾರ್ಮಿಕರು, ಯುವಕರು ಮತ್ತು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಅಲ್ಲದೇ ಆತ ವಿವಿಧ ಹೋಟೆಲ್‌ಗಳ ಬಳಿಯೂ ಗಾಂಜಾ ಮಾರುತ್ತಿದ್ದ. ನೂರ್‌ಜಾನ್ ತಲೆಮರೆಸಿಕೊಂಡಿದ್ದಾಳೆ ಎಂದು ಪೊಲೀಸರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT