ADVERTISEMENT

ಬಡ ವಿದ್ಯಾರ್ಥಿಗಳಿಗೆ ನೆರವಾಗಬೇಕು

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2012, 18:30 IST
Last Updated 4 ಅಕ್ಟೋಬರ್ 2012, 18:30 IST

ಪೀಣ್ಯ ದಾಸರಹಳ್ಳಿ: `ಬಡ ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯ ರೂಪಿಸಿಕೊಳ್ಳಲು ಶ್ರೀಮಂತರು ನೆರವಾಗಬೇಕು~ ಎಂದು ಶಾಸಕ ಎಸ್.ಮುನಿರಾಜು ಹಣವಂತರಿಗೆ ಕೆರೆ ನೀಡಿದರು.

ದಾಸರಹಳ್ಳಿ ಶೆಟ್ಟಿಹಳ್ಳಿ ಸರ್ಕಾರಿ ಶಾಲೆಯಲ್ಲಿ ಲಕ್ಷ್ಮಮ್ಮ ಬೆಟ್ಟೇಗೌಡ ಚಾರಿಟಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ನೀಡಿದ ನೋಟ್ ಪುಸ್ತಕಗಳನ್ನು ವಿತರಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಟ್ರಸ್ಟ್ ಅಧ್ಯಕ್ಷ ಸಿ.ಬಿ.ಶಂಕರೇಗೌಡ,  ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಂಜುನಾಥ್, ಸದಸ್ಯರಾದ ಕೆಂಪಹೊಂಬಾಳಯ್ಯ, ಎನ್.ರಾಮಕೃಷ್ಣಯ್ಯ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಲಲಿತಮ್ಮ, ಗೌರಮ್ಮ, ಮುಖ್ಯೋಪಾಧ್ಯಾಯ ಹುಚ್ಚಪ್ಪ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.