ADVERTISEMENT

ಬನ್ನೇರುಘಟ್ಟಕ್ಕೆ ರಾಜ್ಯಪಾಲರ ಭೇಟಿ

​ಪ್ರಜಾವಾಣಿ ವಾರ್ತೆ
Published 15 ಜೂನ್ 2012, 19:30 IST
Last Updated 15 ಜೂನ್ 2012, 19:30 IST

ಆನೇಕಲ್: ತಾಲ್ಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ರಾಜ್ಯಪಾಲ ಹಂಸರಾಜ್ ಭಾರಧ್ವಾಜ್ ಶುಕ್ರವಾರ ಕುಟುಂಬ ಸಮೇತ ಭೇಟಿ ನೀಡಿ ಉದ್ಯಾನದ ವೀಕ್ಷಣೆ ಮಾಡಿದರು.

ಬೆಳಗ್ಗೆ 10 ಗಂಟೆಗೆ ಉದ್ಯಾನಕ್ಕೆ ಆಗಮಿಸಿದ ರಾಜ್ಯಪಾಲರು ಮಧ್ಯಾಹ್ನ 2ರ ವರೆಗೆ ಉದ್ಯಾನದಲ್ಲಿ ವಿಹರಿಸಿದರು. ಸಸ್ಯಾಹಾರಿ ಪ್ರಾಣಿಗಳ ಸಫಾರಿ, ಟೈಗರ್ ಸಫಾರಿ, ಕರಡಿ ಸಫಾರಿ ಮತ್ತು ಮೃಗಾಲಯವನ್ನು ವೀಕ್ಷಿಸಿ ಉದ್ಯಾನದ ಕಾರ್ಯ ನಿರ್ವಹಣೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು ಎಂದು ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಆರ್. ರಾಜು ತಿಳಿಸಿದ್ದಾರೆ.

ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್. ಎಸ್.ಸುರೇಶ್ ಈ ಸಂದರ್ಭದಲ್ಲಿ ಹಾಜರಿದ್ದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.