
ಪ್ರಜಾವಾಣಿ ವಾರ್ತೆಹೊಸಕೋಟೆ: ಬಸವೇಶ್ವರ ಸಾಮಾಜಿಕ ಕ್ರಾಂತಿಯ ಹರಿಕಾರನಾಗಿದ್ದು ಆತನ ವಚನಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಮಾದಿಗ ದಂಡೋರ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಶಂಕರಪ್ಪ ಹೇಳಿದರು.
ಸಮಿತಿಯ ತಾಲ್ಲೂಕು ಶಾಖೆ ಇಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿಯಲ್ಲಿ ಅವರು ಮಾತನಾಡಿದರು.
ಪುರಸಭೆ ಮಾಜಿ ಅಧ್ಯಕ್ಷ ಎನ್.ನಾಗರಾಜ್, ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ವಿ.ವಿಜಯ ಕುಮಾರ್, ಮುಖಂಡ ಜಿಯಾ ಉಲ್ಲಾ ಮತ್ತಿತರರು ಮಾತನಾಡಿದರು.ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಟಿ.ಎಸ್.ರಾಜಶೇಖರ್, ವೀರಶೈವ ನೌಕರರ ಸಂಘದ ಅಧ್ಯಕ್ಷ ಡಿ.ಎಸ್.ರಾಜಕುಮಾರ್, ತಾಲ್ಲೂಕು ಬಿಜಿಪಿ ಅಧ್ಯಕ್ಷ ಸಿ.ಮುನಿಯಪ್ಪ ಮತ್ತಿತರರು ಭಾಗವಹಿಸಿದ್ದರು.ತಾಲ್ಲೂಕು ಕಚೇರಿಯಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ತಹಶೀಲ್ದಾರ್ ಬಿ.ಮಲ್ಲಿಕಾರ್ಜುನ ಪುಷ್ಪನಮನ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.