ADVERTISEMENT

ಬಾಲಕಿ ಕೊಲೆ: ಆರು ಜನರ ಬಂಧನ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2012, 19:30 IST
Last Updated 2 ಏಪ್ರಿಲ್ 2012, 19:30 IST

ನವಲಗುಂದ: ಯುವಕನೊಬ್ಬ ಕಾಲೇಜು ವಿದ್ಯಾರ್ಥಿನಿಯನ್ನು ಚುಡಾಯಿಸ್ದ್ದಿದು, ಆತನ ವಿರುದ್ಧ ಸೇಡು ತೀರಿಸಿಕೊಳ್ಳಲು ಅವನ 8 ವರ್ಷದ ತಂಗಿಯನ್ನೇ ಕೊಲೆ ಮಾಡಿದ ಘಟನೆ ತಾಲ್ಲೂಕಿನ ಹಾಳಕುಸುಗಲ್ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜು ವಿದ್ಯಾರ್ಥಿನಿ ಸವಿತಾ ಬೆಳವಡಿ, ಶಿವಪುತ್ರಪ್ಪ ಬೆಳವಡಿ, ಹನಮಂತಪ್ಪ ಬೆಳವಡಿ, ಶಿವಕ್ಕ ಬೆಳವಡಿ,  ಗಂಗಾಧರ ಬೆಳವಡಿ ಹಾಗೂ ಸುರೇಶ ಬೆಳವಡಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಶಂಸೆ: ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಸಿಪಿಐ ಎಸ್.ಎಸ್.ಪಡೋಲಕರ, ಪಿಎಸ್‌ಐ ವೆಂಕಟಸ್ವಾಮಿ ಹಾಗೂ ತನಿಖಾ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರವಿಕುಮಾರ ಶ್ಲಾಘಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.