ADVERTISEMENT

ಬಾಲಸುಬ್ರಹ್ಮಣ್ಯಂ, ಜಯಮಾಲಾಗೆ ‘ಎನ್ಟಿಆರ್’ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 12 ಜುಲೈ 2017, 19:30 IST
Last Updated 12 ಜುಲೈ 2017, 19:30 IST
ಬಾಲಸುಬ್ರಹ್ಮಣ್ಯಂ, ಜಯಮಾಲಾ
ಬಾಲಸುಬ್ರಹ್ಮಣ್ಯಂ, ಜಯಮಾಲಾ   

ಬೆಂಗಳೂರು: ಕರ್ನಾಟಕ ತೆಲುಗು ಅಕಾಡೆಮಿ ವತಿಯಿಂದ ನೀಡಲಾಗುವ ‘ಎನ್.ಟಿ.ರಾಮರಾವ್ ರಾಷ್ಟ್ರೀಯ ಪುರಸ್ಕಾರ’ಕ್ಕೆ ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಹಾಗೂ ನಟಿ ಜಯಮಾಲಾ ಅವರನ್ನು ಈ ಬಾರಿ ಆಯ್ಕೆ ಮಾಡಲಾಗಿದೆ.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷ ಡಾ.ಎ. ರಾಧಾಕೃಷ್ಣರಾಜು, ‘15ರಂದು ಸಂಜೆ 4ಕ್ಕೆ ಪುರಭವನದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದ್ದು, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಉದ್ಘಾಟಿಸಲಿದ್ದಾರೆ’ ಎಂದರು.

‘ಹೈದರಾಬಾದ್‌ನ ಗಾಯಕ ಚಂದ್ರತೇಜ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದ್ದು, ಗಾಯಕ ಘಂಟಸಾಲ ಅವರ ಜೀವನಚರಿತ್ರೆಯ ಕೃತಿಯನ್ನು ಬಿಡುಗಡೆ ಮಾಡುತ್ತೇವೆ’ ಎಂದು ಅವರು ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.