ADVERTISEMENT

ಬಿಎಂಆರ್‌ಸಿಎಲ್‌ ಅರ್ಜಿ: ವಿಚಾರಣೆ ‌‌ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 29 ಮೇ 2018, 19:41 IST
Last Updated 29 ಮೇ 2018, 19:41 IST

ಬೆಂಗಳೂರು: ನೌಕರರ ಸಂಘಕ್ಕೆ ಮಾನ್ಯತೆ, ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ನೌಕರರ ಸಂಘ ಕರೆ ನೀಡಿದ್ದ ಮುಷ್ಕರ ಪ್ರಶ್ನಿಸಿ ಬಿಎಂಆರ್‌ಸಿಎಲ್ ಸಲ್ಲಿಸಿರುವ ಮಧ್ಯಂತರ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜೂನ್‌ 4ಕ್ಕೆ ಮುಂದೂಡಿದೆ.

ಈ ಕುರಿತ ಅರ್ಜಿಯನ್ನು ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ಅವರಿದ್ದ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಹಾಜರಿದ್ದ ಬಿಎಂಆರ್‌ಸಿಎಲ್ ಹಾಗೂ ನೌಕರರ ಸಂಘದ ಪರ ವಕೀಲರು, ‘ಬುಧವಾರ (ಮೇ 30) ಕೇಂದ್ರ ಕಾರ್ಮಿಕ ಆಯುಕ್ತರ ಮುಂದೆ ಸಂಘದ ಜೊತೆ ಸಂಧಾನ ಸಭೆ ನಿಗದಿಪಡಿಸಲಾಗಿದೆ. ಈ ಸಭೆಯಲ್ಲಿ ನೌಕರರ ಬೇಡಿಕೆಗಳ ಕುರಿತು ಚರ್ಚಿಸಲಾಗುವುದು’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.

ADVERTISEMENT

ಇದಕ್ಕೆ ಪ್ರತಿಕ್ರಿಯಿಸಿದನ್ಯಾಯಪೀಠ, ‘ಉಭಯ ಬಣಗಳೂ ಕಾರ್ಮಿಕ ಆಯುಕ್ತರ ಮುಂದೆ ಸಂಧಾನ ಸಭೆ ನಡೆಸಲಿ. ಅಲ್ಲಿ ಕೈಗೊಳ್ಳಲಾಗುವ ನಿರ್ಧಾರಗಳ ಕುರಿತು ನ್ಯಾಯಾಲಯಕ್ಕೆ ವರದಿ ಸಲ್ಲಿಸಿ. ಆ ಬಳಿಕ ವಿಚಾರಣೆ ಮುಂದುವರಿಸೋಣ’ ಎಂದು ಅಭಿಪ್ರಾಯ ವ್ಯಕ್ತಪಡಿಸಿ ವಿಚಾರಣೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.