ADVERTISEMENT

ಬಿಎಂಟಿಸಿ ಬಸ್‌ನಲ್ಲಿ ಬೆಂಕಿ

​ಪ್ರಜಾವಾಣಿ ವಾರ್ತೆ
Published 19 ಜನವರಿ 2016, 19:47 IST
Last Updated 19 ಜನವರಿ 2016, 19:47 IST
ಬಿಎಂಟಿಸಿ ಬಸ್‌ನಲ್ಲಿ ಬೆಂಕಿ
ಬಿಎಂಟಿಸಿ ಬಸ್‌ನಲ್ಲಿ ಬೆಂಕಿ   

ಬೆಂಗಳೂರು: ಮೆಜೆಸ್ಟಿಕ್‌ ನಿಲ್ದಾಣದ ಪ್ಲಾಟ್‌ಫಾರಂ 21ರಲ್ಲಿ ನಿಂತಿದ್ದ ಬಿಎಂಟಿಸಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಮಂಗಳವಾರ ಮಧ್ಯಾಹ್ನ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ದೀಪಾಂಜಲಿನಗರ ಡಿಪೊಗೆ ಸೇರಿದ ಬಸ್‌ (ಕೆಎ 01 6868), ಮಧ್ಯಾಹ್ನ 12.10ಕ್ಕೆ ಮೆಜೆಸ್ಟಿಕ್ ನಿಲ್ದಾಣದಿಂದ ಪೀಣ್ಯಕ್ಕೆ ಹೊರಡುವ ತಯಾರಿಯಲ್ಲಿತ್ತು. ಈ ವೇಳೆ ಎಂಜಿನ್‌ನಲ್ಲಿ ಶಾರ್ಟ್‌ ಸರ್ಕಿಟ್ ಉಂಟಾಗಿ ಹೊಗೆ ಬರಲಾರಂಭಿಸಿದೆ. ಕೂಡಲೇ ಚಾಲಕ ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರನ್ನು ಕೆಳಗಿಳಿಸಿ, ಅಗ್ನಿಶಾಮಕ ನಿಯಂತ್ರಣ ಕೊಠಡಿಗೆ (101) ಕರೆ ಮಾಡಿದ್ದಾರೆ.

ಸ್ವಲ್ಪ ಸಮಯದಲ್ಲೇ ಬಸ್‌ನ ಮುಂಭಾಗ ಹೊತ್ತಿ ಉರಿದಿದೆ. ಒಂದು ವಾಹನದಲ್ಲಿ ಸ್ಥಳಕ್ಕೆ ತೆರಳಿದ ಅಗ್ನಿಶಾಮಕ ಸಿಬ್ಬಂದಿ, 15 ನಿಮಿಷ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

‘ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್ಸನ್ನು ಡಿಪೊಗೆ ಕಳುಹಿಸಲಾಗಿದೆ. ಘಟನೆಗೆ ನಿರ್ದಿಷ್ಟ ಕಾರಣವೇನು ಎಂಬುದನ್ನು ಪತ್ತೆ ಹಚ್ಚಿ ವರದಿ ಕೊಡುವಂತೆ ಬಿಎಂಟಿಸಿ ತಾಂತ್ರಿಕ ವಿಭಾಗಕ್ಕೆ ಸೂಚಿಸಿದ್ದೇವೆ’ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.