ಬೆಂಗಳೂರು: ಕೇಂದ್ರ ಸಾರ್ವಜನಿಕ ಸ್ವಾಮ್ಯದ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ವಿದ್ಯುನ್ಮಾನ ವಿಭಾಗದಲ್ಲಿ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಬಿಎಚ್‌ಇಎಲ್ ವಿದ್ಯುನ್ಮಾನ ವಿಭಾಗದ ಕಾರ್ಯನಿರ್ವಾಹಕ ನಿರ್ದೇಶಕ ಜಿ.ಗಣಪತಿ ರಾಮನ್ ರಾಷ್ಟ್ರ ಧ್ವಜಾರೋಹಣ ಮಾಡಿದರು.
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿಯಿಂದ ಅವರು ಗೌರವ ರಕ್ಷೆ ಸ್ವೀಕರಿಸಿದರು. ಆನಂತರ ರಾಷ್ಟ್ರಗೀತೆ, ನಾಡಗೀತೆ ಹಾಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.