ಬೆಂಗಳೂರು: ಸೌತ್‌ವೆಸ್ಟ್ ಮೈನಿಂಗ್ ಕಂಪೆನಿಯಿಂದ ಲಂಚ ಪಡೆದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಇತರರ ವಿರುದ್ಧ ದಾಖಲಿಸಿದ್ದ (ಎಫ್‌ಐಆರ್) ರದ್ದು ಮಾಡಿ ರುವ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಕುರಿತು ಕಾನೂನು ಸಲಹೆ ಪಡೆಯುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಲೋಕಾಯುಕ್ತದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಚ್.ಎನ್.ಸತ್ಯನಾರಾಯಣ ರಾವ್ ಶುಕ್ರವಾರ ಇಲ್ಲಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಕಾನೂನು ಸಲಹೆ ಕೋರಲಾಗಿದ್ದು, ಈ ತಜ್ಞರ ಅಭಿಪ್ರಾಯ ದೊರೆತ ತಕ್ಷಣ ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು~ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.