ADVERTISEMENT

ಬಿಜೆಪಿಗೆ ಕಾಂಗ್ರೆಸ್ ಕಾರ್ಯಕರ್ತರ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2012, 19:30 IST
Last Updated 7 ಮಾರ್ಚ್ 2012, 19:30 IST

ಯಲಹಂಕ: ಶಿವಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುತ್ತುಗದಹಳ್ಳಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ   ಶಾಸಕ ಎಸ್.ಆರ್.ವಿಶ್ವನಾಥ್ ಅವರ ಸಮ್ಮುಖದಲ್ಲಿ ಸುಮಾರು 60 ಜನ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಮುಖಂಡ ಲೋಕೇಶ್‌ರವರ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ಜಿಲ್ಲಾ ಪಂಚಾಯ್ತಿ ಸದಸ್ಯ ಕೆ.ಎಂ.ಮಾರೇಗೌಡ, ತಾಲ್ಲೂಕು ಪಂಚಾಯ್ತಿ ಸದಸ್ಯ ರಾಮಚಂದ್ರಪ್ಪ, ಕ್ಷೇತ್ರದ ಬಿಜೆಪಿ ಅಧ್ಯಕ್ಷ ದಿಬ್ಬೂರು ಜಯಣ್ಣ, ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಣ್ಣ ಹಾಜರಿದ್ದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.