ಹೆಸರಘಟ್ಟ: ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಡಿ.ವಿ ಸದಾನಂದಗೌಡ ಮತ್ತು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರಾಜು ಅವರ ಕಾರುಗಳನ್ನು ಚುನಾವಣಾಧಿಕಾರಿಗಳು ಮಂಗಳವಾರ ವಶಪಡಿಸಿಕೊಂಡಿದ್ದಾರೆ.
ದಾಸರಹಳ್ಳಿಯ ಪೈಪ್‌ಲೈನ್ ರಸ್ತೆಯಲ್ಲಿರುವ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ಚುನಾವಣಾ ಚುಟುವಟಿಕೆಯಲ್ಲಿ ಪಾಲ್ಗೊಳ್ಳಲು ಶಾಸಕರು ಆಗಮಿಸಿದ್ದರು. ಆದರೆ ಕಾರುಗಳಿಗೆ ಚುನಾವಣಾಧಿಕಾರಿಗಳಿಂದ ಅನುಮತಿ ಇರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.