ADVERTISEMENT

ಬಿಜೆಪಿ, ಸಂಘಪರಿವಾರದ ವಿರುದ್ಧ ಲೇಖಕರ, ಚಿಂತಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2017, 19:30 IST
Last Updated 3 ಅಕ್ಟೋಬರ್ 2017, 19:30 IST
ಚಿಂತಕರು, ಲೇಖಕರು ಹಾಗೂ ಪ್ರಗತಿಪರರು ಪುರಭವನದ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು –ಪ್ರಜಾವಾಣಿ ಚಿತ್ರ
ಚಿಂತಕರು, ಲೇಖಕರು ಹಾಗೂ ಪ್ರಗತಿಪರರು ಪುರಭವನದ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು –ಪ್ರಜಾವಾಣಿ ಚಿತ್ರ   

ಬೆಂಗಳೂರು: ನಟ ಪ್ರಕಾಶ್ ರೈ ವಿರುದ್ಧ ಸಂಘ ಪರಿವಾರದವರು ಹಾಗೂ ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಹೇಳಿಕೆ ನೀಡುತ್ತಿರುವುದನ್ನು ಖಂಡಿಸಿ ಪ್ರಗತಿಪರರು, ಸಾಹಿತಿಗಳು, ಲೇಖಕರು, ಚಿಂತಕರು ಪುರಭವನದ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು.

ಲೇಖಕಿ ಡಾ.ವಿಜಯಾ ಮಾತನಾಡಿ, ‘ನರೇಂದ್ರ ಮೋದಿ ಅವರನ್ನು ನಂಬಿ ಜನ ಪ್ರಧಾನಿಯನ್ನಾಗಿ ಅವರನ್ನು ಆಯ್ಕೆ ಮಾಡಿದ್ದಾರೆ. ಹೀಗಾಗಿ, ಅವರನ್ನು ಜನ ಪ್ರಶ್ನಿಸುತ್ತಾರೆ. ಅದೇ ರೀತಿ ಪ್ರಕಾಶ್ ಸಹ ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ಉತ್ತರ ಕೊಡುವುದು ಅವರ ಜವಾಬ್ದಾರಿ. ಅದನ್ನು ಹೊರತು ಪಡಿಸಿ ಪ್ರಶ್ನೆ ಮಾಡಿದವರ ವೈಯಕ್ತಿಕ ಜೀವನದ ಬಗ್ಗೆ ಮಾತನಾಡುವುದು ಹೇಡಿತನ’ ಎಂದು ಹೇಳಿದರು.

ಚಿಂತಕ ಜಿ.ಎನ್.ನಾಗರಾಜ್, ‘ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಪ್ರಶ್ನಿಸುವ ಹಕ್ಕಿದೆ. ಪ್ರಧಾನಿ ಅವರನ್ನು ಸಾರ್ವಜನಿಕರು ಪ್ರಶ್ನಿಸಬಾರದು ಅಂತ ಎಲ್ಲಿಯೂ ಹೇಳಿಲ್ಲ. ಪ್ರಕಾಶ್ ರೈ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಂಘ ಪರಿವಾರವು ಹಾಗೂ ಬಿಜೆಪಿಯು ಪ್ರಶ್ನೆ ಎತ್ತುವ ಧ್ವನಿಯನ್ನು ಅಡಗಿಸುವ ಕುತಂತ್ರ ಮಾಡುತ್ತಿದೆ’ ಎಂದು ದೂರಿದರು.

ADVERTISEMENT

‘ಕರ್ನಾಟಕದ ಸಂಸದನಾಗಿ ರಾಜ್ಯದ ಸಮಸ್ಯೆಗಳ ಬಗ್ಗೆ ಮಾತನಾಡ ಬೇಕಿದ್ದ ಪ್ರತಾಪ ಸಿಂಹ ಅವರು, ಪ್ರಕಾಶ್ ರೈ ಅವರ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿ ಚರಂಡಿ ರಾಜಕೀಯ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.