ADVERTISEMENT

ಬಿಬಿಎಂಪಿಗೆ ಸೇರ್ಪಡೆಯಾದ ಗ್ರಾಮಗಳಲ್ಲಿ ಅವ್ಯವಸ್ಥೆ: ಮೂಲಸೌಕರ್ಯಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2012, 19:30 IST
Last Updated 7 ಮಾರ್ಚ್ 2012, 19:30 IST

ತಲಘಟ್ಟಪುರ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಹೊಸದಾಗಿ ಸೇರ್ಪಡೆಯಾದ ಎಲ್ಲ ಗ್ರಾಮಗಳ ಅಭಿವೃದ್ಧಿಗೆ ಪಾಲಿಕೆ ಮತ್ತು ಸರ್ಕಾರ ಹೆಚ್ಚಿನ ಅನುದಾನ ನೀಡುವ ಮೂಲಕ ಮೂಲ ಸೌಕರ್ಯಗಳನ್ನು ದೊರಕಿಸಿ ಕೊಡಬೇಕು ಎಂದು ಪಾಲಿಕೆ ಸದಸ್ಯ ಎಸ್.ಗಂಗಾಧರ್ ಒತ್ತಾಯಿಸಿದರು.

ಆವಲಹಳ್ಳಿ ಮತ್ತು ಅಂಜನಾಪುರದಲ್ಲಿ ರೂ 2.50 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಕಾಂಕ್ರೆಟ್ ರಸ್ತೆ ಮತ್ತು ಒಳಚರಂಡಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

`ಹೊಸದಾಗಿ ಪಾಲಿಕೆಗೆ ಸೇರ್ಪಡೆಯಾದ ಗ್ರಾಮಗಳು ಸಂಪೂರ್ಣ ರೆವಿನ್ಯೊ ಬಡಾವಣೆಗಳಾಗಿದ್ದು ಕುಡಿಯುವ ನೀರು, ರಸ್ತೆ, ಒಳಚರಂಡಿ ಮೊದಲಾದ ಸಮಸ್ಯೆಗಳಿವೆ. ಸರ್ಕಾರ ಕೂಡಲೇ ಕಾವೇರಿ ನೀರು ಪೂರೈಕೆ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ವಿಶೇಷ ಅನುದಾನ ನೀಡಬೇಕು~ ಎಂದು ಅವರು ಹೇಳಿದರು.

ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರವೀಂದ್ರ, ಮಾಜಿ ಸದಸ್ಯರಾದ ಸೈಯದ್ ಯೂಸುಫ್, ಸೈಯದ್ ಯಾಸಿನ್, ಕಾಂಗ್ರೆಸ್ ಮುಖಂಡರಾದ ಸೈಯದ್ ಮೋಯಿದ್ದೀನ್, ಸೈಯದ್ ಮದರ್‌ಸಾಬ್ ಮತ್ತಿತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.