ADVERTISEMENT

ಬಿಬಿಎಂಪಿ ಆಯುಕ್ತರಿಗೆ ಹೈಕೋರ್ಟ್‌ ನೋಟಿಸ್

​ಪ್ರಜಾವಾಣಿ ವಾರ್ತೆ
Published 4 ಮೇ 2018, 20:06 IST
Last Updated 4 ಮೇ 2018, 20:06 IST
ಬಿಬಿಎಂಪಿ ಆಯುಕ್ತರಿಗೆ ಹೈಕೋರ್ಟ್‌ ನೋಟಿಸ್
ಬಿಬಿಎಂಪಿ ಆಯುಕ್ತರಿಗೆ ಹೈಕೋರ್ಟ್‌ ನೋಟಿಸ್   

ಬೆಂಗಳೂರು: ‘ಕಸ ಗುಡಿಸುವ ಯಂತ್ರಗಳ (ಟ್ರಕ್ ಮೌಂಟೆಡ್ ಸ್ವೀಪಿಂಗ್ ಮೆಷಿನ್) ಖರೀದಿಯಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಮೊತ್ತದ ಅವ್ಯವಹಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು’ ಎಂದು ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತರು ಹಾಗೂ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ನಗರದ ಆರ್. ಗೋಪಾಲ್ ಎಂಬುವರು ಸಲ್ಲಿಸಿರುವ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಬಿ. ವೀರಪ್ಪ ಹಾಗೂ ನ್ಯಾಯಮೂರ್ತಿ ಎಸ್‌.ಸುನೀಲ್ ದತ್ ಯಾದವ್ ಅವರಿದ್ದ ರಜಾಕಾಲದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ಬಿಬಿಎಂಪಿ ಕಾರ್ಯನಿರ್ವಾಹಕ ಎಂಜಿನಿಯರ್‌ಗಳು ಹಾಗೂ ದೆಹಲಿಯ ಮೆಸರ್ಸ್‌ ಟಿ.ಪಿ.ಎಸ್‌.ಇನ್‌ಫ್ರಾಸ್ಟ್ರಕ್ಚರ್‌ ಲಿಮಿಟೆಡ್‌ ಕಂಪನಿಗೂ ನೋಟಿಸ್‌ ಜಾರಿಗೊಳಿಸಲು ಆದೇಶಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.