ಬೆಂಗಳೂರು: ಕಟ್ಟಡ ನಿರ್ಮಾಣಕ್ಕೆ ಅಡ್ಡಿ ಹಾಗೂ ಕೊಲೆ ಬೆದರಿಕೆ ಆರೋಪದ ಮೇಲೆ ಶಾಂತಲಾನಗರ ವಾರ್ಡ್‌ನ ಬಿಬಿಎಂಪಿ ಸದಸ್ಯ ಶಿವಕುಮಾರ್ ಅವರನ್ನು ಕಬ್ಬನ್‌ಪಾರ್ಕ್ ಠಾಣೆ ಪೊಲೀಸರು ಗುರುವಾರ ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.
ನಗರದ ವಿಠಲ್‌ಮಲ್ಯ ರಸ್ತೆಯಲ್ಲಿ ಹೋಟೆಲ್‌ನ ಕಟ್ಟಡ ನಿರ್ಮಾಣಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಶಿವಕುಮಾರ್ ವಿರುದ್ಧ ಹೋಟೆಲ್ ಮಾಲೀಕ ಆದಿತ್ಯ ರಹೇಜಾ ಕಬ್ಬನ್‌ಪಾರ್ಕ್ ಠಾಣೆಯಲ್ಲಿ ಏ.5 ರಂದು ದೂರು ನೀಡಿದ್ದರು. ಅವರ ವಿರುದ್ಧ ಕಳವು, ಅತಿಕ್ರಮ ಪ್ರವೇಶ, ಕೊಲೆ ಬೆದರಿಕೆ ಪ್ರಕರಣ ದಾಖಲಾಗಿದ್ದವು.
ದೂರನ್ನು ಆಧರಿಸಿ ಗುರುವಾರ ಕೋಲಂದಪ್ಪ ಗಾರ್ಡನ್‌ನಲ್ಲಿರುವ ಅವರ ನಿವಾಸದ ಮೇಲೆ ದಾಳಿ ನಡೆಸಿ ಅವರನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.