ADVERTISEMENT

ಬಿಸಿಲ ಬೇಗೆಗೆ ಮಳೆಯ ತಂಪು

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2013, 19:59 IST
Last Updated 22 ಏಪ್ರಿಲ್ 2013, 19:59 IST
ಅನಿಲ್ ಕುಂಬ್ಳೆ ವೃತ್ತದ ರಸ್ತೆಯಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ತೊಂದರೆ ಅನುಭವಿಸಿದರು 	-ಪ್ರಜಾವಾಣಿ ಚಿತ್ರ
ಅನಿಲ್ ಕುಂಬ್ಳೆ ವೃತ್ತದ ರಸ್ತೆಯಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ತೊಂದರೆ ಅನುಭವಿಸಿದರು -ಪ್ರಜಾವಾಣಿ ಚಿತ್ರ   

ಬೆಂಗಳೂರು: ಒಂದು ತಿಂಗಳಿಂದೀಚೆಗೆ ಬಿಸಿಲ ಬೇಗೆ ಇದ್ದ ನಗರದಲ್ಲಿ ಸೋಮವಾರ ಸಂಜೆ ಗುಡುಗು ಸಹಿತ ಸುರಿದ ಮಳೆಯಿಂದಾಗಿ ತಂಪು ವಾತಾವರಣ ಕಂಡುಬಂತು. ದಿಢೀರ್ ಸುರಿದ ಮಳೆಯಿಂದಾಗಿ ಕೆಲವೆಡೆ ವಾಹನ ಸಂಚಾರ ಅಸ್ತವ್ಯಸ್ತಗೊಂಡು ಪ್ರಯಾಣಿಕರು ಪರದಾಡುವಂತಾದರೆ, ಮತ್ತೊಂದೆಡೆ ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿ ಜನ ತೀವ್ರ ತೊಂದರೆ ಅನುಭವಿಸಿದರು.

ನಗರದಲ್ಲಿ ಗರಿಷ್ಠ 1.8 ಮಿ.ಮೀ. ಮಳೆಯಾಗಿದ್ದು, ವಿಮಾನ ನಿಲ್ದಾಣದಲ್ಲಿ 2.6 ಮಿ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಗೋರಿ ಪಾಳ್ಯದ ಮುಖ್ಯರಸ್ತೆಯಲ್ಲಿ ಮರವೊಂದು ಧರೆಗುರುಳಿದ್ದು, ಕಬ್ಬನ್ ಉದ್ಯಾನ ರಸ್ತೆ, ಕುಂಬ್ಳೆ ವೃತ್ತ, ಬಸವೇಶ್ವರ ವೃತ್ತ, ಟ್ರಿನಿಟಿ ವೃತ್ತ, ಫ್ರೇಜರ್ ಟೌನ್, ಕನಕಪುರ ರಸ್ತೆ ಸೇರಿದಂತೆ ಹಲವೆಡೆ ಮಳೆ ನೀರು ನಿಂತಿದ್ದರಿಂದ ಸಂಚಾರಕ್ಕೆ ಅಡ್ಡಿಯಾಯಿತು. ಇದರಿಂದ ಕೆಲ ಕಾಲ ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದರು. ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದು, ಜನರು ತೀವ್ರ ತೊಂದರೆ ಅನುಭವಿಸುವಂತಾಯಿತು. ಉಳಿದಂತೆ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.