ಯಲಹಂಕ: ದಲಿತ ಸಂಘರ್ಷ ಸಮಿತಿ (ಸಮತಾವಾದ)ಯ ರಾಜ್ಯ ಘಟಕದ ವತಿಯಿಂದ ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ದಲಿತ ಸಂಘಟನೆಯ ಸಂಸ್ಥಾಪಕ ಪ್ರೊ.ಬಿ. ಕೃಷ್ಣಪ್ಪ ಅವರ 75ನೇ ಹುಟ್ಟುಹಬ್ಬವನ್ನು ಗುರುವಾರ ಆಚರಿಸಲಾಯಿತು.
ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಎಚ್. ಮಾರಪ್ಪ, `ಕಾರ್ಯಕರ್ತರು ಸಂಘಟಿತರಾಗಿ ಶೋಷಿತ ಜನಾಂಗದ ಏಳಿಗೆಗಾಗಿ ಹಗಲಿರುಳು ಶ್ರಮಿಸಬೇಕು. ಒಗ್ಗಟ್ಟಿನ ಹೋರಾಟದಿಂದ ದಲಿತರು ಸವಲತ್ತುಗಳನ್ನು ಪಡೆಯಲು ಸಾಧ್ಯ' ಎಂದರು.
ಕಾರ್ಯಕ್ರಮದಲ್ಲಿ ಸಮಿತಿಯ ರಾಜ್ಯ ಉಪಪ್ರಧಾನ ಸಂಚಾಲಕ ಎಂ.ಎಲ್. ಮುನಿಬೈರಪ್ಪ, ಬೆಂಗಳೂರು ಉತ್ತರ ತಾಲ್ಲೂಕು ಪ್ರಧಾನ ಸಂಚಾಲಕ ಡಿ.ವಿ.ವೀರಭದ್ರೇಗೌಡ, ಉಪ ಪ್ರಧಾನ ಸಂಚಾಲಕ ಕೃಷ್ಣಪ್ಪ ಮತ್ತು ಇತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.