ADVERTISEMENT

ಬೆಂಕಿ ಹಚ್ಚಿಕೊಂಡು ಚಾಲಕ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2013, 20:16 IST
Last Updated 20 ಡಿಸೆಂಬರ್ 2013, 20:16 IST

ಬೆಂಗಳೂರು:  ವಿಜಯನಗರದ 22ನೇ ಅಡ್ಡರಸ್ತೆಯಲ್ಲಿ ಗುರು­ವಾರ ರಮೇಶ್‌ (45) ಎಂಬುವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೊದಲು ಆಟೊ ಓಡಿಸುತ್ತಿದ್ದ ರಮೇಶ್‌, ಕೆಲ ದಿನಗಳಿಂದ ಕ್ಯಾಬ್‌ ಚಾಲನೆ ಮಾಡುತ್ತಿದ್ದರು. ಬೆಳಿಗ್ಗೆ 10 ಗಂಟೆ ಸುಮಾರಿಗೆ ಮನೆಯಲ್ಲೇ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ.

ಮನೆಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯ­ರು, ಬಾಗಿಲು ಮುರಿದು ಒಳಗೆ ಹೋಗಿದ್ದಾರೆ. ಈ ವೇಳೆ­ಗಾಗಲೇ ರಮೇಶ್‌ ದೇಹ ಸಂಪೂರ್ಣ ಸುಟ್ಟು ಹೋಗಿತ್ತು ಎಂದು ಪೊಲೀಸರು ಹೇಳಿದ್ದಾರೆ.

ಪತಿ ಮಾನಸಿಕ ಅಸ್ವಸ್ಥರಾಗಿದ್ದು, ನೊಂದು ಆತ್ಮಹತ್ಯೆ ಮಾಡಿ­ಕೊಂಡಿ­ರಬಹುದು’ ಎಂದು ಪತ್ನಿ ರಾಣಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.